ಹೊನ್ನಾಳಿ: ‘ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಿಲ್ಲದೆ ವಿದ್ಯಾರ್ಥಿಗಳು ಪಾಠ ಪ್ರವಚನದಿಂದ ವಂಚಿತರಾಗುತ್ತಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದರು.

ಶನಿವಾರ ಕಾಲೇಜಿಗೆ ಭೇಟಿ ನೀಡಿ ಮಾತನಾಡಿದ ಅವರು, ಕಳೆದ 20 ದಿನಗಳಿಂದ 38 ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆ ಈಡೇರಿಸುವಂತೆ ಪ್ರತಿಭಟನೆ ನಡೆಸುತ್ತಿದ್ದಾರೆ. 10 ಜನ ಉಪನ್ಯಾಸಕರು ಮಾತ್ರ ದೈನಂದಿನ ಪಾಠದಲ್ಲಿ ತೊಡಗಿದ್ದಾರೆ. ಆದರೆ, ಇಲ್ಲಿ ಸುಮಾರು 1,200 ವಿದ್ಯಾರ್ಥಿಗಳು ಇದ್ದಾರೆ, ಅವರಿಗೆಲ್ಲ ಖಾಯಂ ಉಪನ್ಯಾಸಕರು ಎಷ್ಟು ಪಾಠ ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.

ಈ ಸರ್ಕಾರಿ ಕಾಲೇಜಿಗೆ ಗ್ರಾಮೀಣ ಪ್ರದೇಶಗಳಿಂದ ನೂರಾರು ವಿದ್ಯಾರ್ಥಿಗಳು ಆಗಮಿಸುತ್ತಾರೆ. ಅವರ ಪೋಷಕರು ಕಡುಬಡತನದಲ್ಲಿ ತಮ್ಮ ಮಕ್ಕಳನ್ನು ಕಾಲೇಜಿಗೆ ಕಳಿಸುತ್ತಿದ್ದಾರೆ. ಅಂತಹ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.