ದಾವಣಗೆರೆ: ರಾಜ್ಯಸಭೆ ಮಾಜಿ ಸದಸ್ಯ, ಸಾಧು ಸದ್ಧರ್ಮ ವೀರಶೈವ ಸಂಘದ ಅಧ್ಯಕ್ಷ ಕೆ.ಆರ್. ಜಯದೇವಪ್ಪ (86) ಗುರುವಾರ ವಯೋಸಹಜ ಕಾಯಿಲೆಯಿಂದ ಎಸ್.ಎಸ್. ಹೈಟೆಕ್ ಆಸ್ಪತ್ರೆಯಲ್ಲಿ ನಿಧನರಾದರು.

ರಾಜಕೀಯ, ಸಾಮಾಜಿಕ, ಧಾರ್ಮಿಕ, ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಅವರು ಕೆಲಸ ಮಾಡಿದ್ದರು. ಮೃತರಿಗೆ ಪತ್ನಿ, ಪುತ್ರಿ, ಪುತ್ರ, ಮೊಮ್ಮಕ್ಕಳು ಇದ್ದಾರೆ. ಪಾರ್ಥಿವ ಶರೀರವನ್ನು ದಾವಣಗೆರೆ ವಿದ್ಯಾನಗರದ ಈಶ್ವರ ಪಾರ್ವತಿ ಗಣಪತಿ ದೇವಸ್ಥಾನದ ಹತ್ತಿರ ಶಿಕ್ಷಕರ ಬಡಾವಣೆಯಲ್ಲಿ ಅವರ ನಿವಾಸದಲ್ಲಿ ಡಿ.24ರ ಮಧ್ಯಾಹ್ನ 1ರ ವರೆಗೆ ಸಾರ್ವಜನಿಕರ ದರ್ಶನಕ್ಕಾಗಿ ಇಡಲಾಗುವುದು. ಮಧ್ಯಾಹ್ನ 2ಕ್ಕೆ ಬಾಡದಿಂದ ಕಂದಗಲ್‌ಗೆ ಹೋಗುವ ರಸ್ತೆಯಲ್ಲಿರುವ ಅವರ ತೋಟದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.