ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: ನವೋದಯ ಶಾಲೆಯ ನಾಲ್ವರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

Last Updated 12 ಡಿಸೆಂಬರ್ 2021, 6:03 IST
ಅಕ್ಷರ ಗಾತ್ರ

ದಾವಣಗೆರೆ: ಚನ್ನಗಿರಿ ನವೋದಯ ಶಾಲೆಯ ನಾಲ್ವರು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.

ಶಾಲಾ/ಕಾಲೇಜು, ನರ್ಸಿಂಗ್, ಅರೆ ವೈದ್ಯಕೀಯ ವಿದ್ಯಾರ್ಥಿಗಳ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಡಿ. 1ರಿಂದ 11ರ ವರೆಗೆ 4882 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ 3,667 ಫಲಿತಾಂಶ ಬಂದಿದ್ದು, 1,215 ಫಲಿತಾಂಶ ಬರಬೇಕಿದೆ. ಅದರಲ್ಲಿ ಶನಿವಾರ 625 ವಿದ್ಯಾರ್ಥಿಗಳ ಗಂಟಲು ದ್ರವ ತೆಗೆದುಕೊಳ್ಳಲಾಗಿತ್ತು.

ಭಾನುವಾರ 544 ನೆಗೆಟಿವ್ ಮತ್ತು 4 ಪಾಸಿಟಿವ್ ಆಗಿವೆ. ನಾಲ್ವರೂ ಕೂಡ ಚನ್ನಗಿರಿ ದೇವರಹಳ್ಳಿಯಲ್ಲಿರುವ ನವೋದಯ ಶಾಲೆಯ ಮಕ್ಕಳಾಗಿದ್ದಾರೆ.

ನಾಲ್ವರು ವಿದ್ಯಾರ್ಥಿಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ನವೋದಯ ಶಾಲೆಯ ಎಲ್ಲ 514 ವಿದ್ಯಾರ್ಥಿಗಳು, 25 ಶಿಕ್ಷಕರ ಗಂಟಲು ದ್ರವ ಸಂಗ್ರಹಿಸಲಾಗಿದೆ. ನವೋದಯ ಶಾಲೆಯನ್ನು ಸೀಲ್ ಡೌನ್ ಮಾಡಲು ಕ್ರಮ ವಹಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ಜಿ.ಡಿ. ರಾಘವನ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT