ಕೆಲಸ ಕೊಡಿಸುವುದಾಗಿ ವಂಚನೆ: ಆರೋಪಿ ಬಂಧನ

7

ಕೆಲಸ ಕೊಡಿಸುವುದಾಗಿ ವಂಚನೆ: ಆರೋಪಿ ಬಂಧನ

Published:
Updated:
Deccan Herald

ದಾವಣಗೆರೆ: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ, ವಂಚಿಸುತ್ತಿದ್ದ ಆರೋಪಿ ತಾಲ್ಲೂಕಿನ ವಡ್ಡಿನಹಳ್ಳಿಯ ಗಂಗಾಧರ ಎಂಬುವವನನ್ನು ಡಿಸಿಬಿ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ತನ್ನನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿ ಎಂದು ಪರಿಚಯಿಸಿಕೊಳ್ಳುತ್ತಿದ್ದ ಗಂಗಾಧರ, ಉದ್ಯೋಗಾಕಾಂಕ್ಷಿಗಳಲ್ಲಿ ಸರ್ಕಾರಿ ಕೆಲಸದ ಆಸೆ ಹುಟ್ಟಿಸುತ್ತಿದ್ದ. ಹೀಗೆಯೇ ಶಿಕಾರಿಪುರ ತಾಲ್ಲೂಕು ನೆಲವಾಗಿಲು ಗ್ರಾಮದ ಚಂದ್ರಪ್ಪ ಅವರಿಂದ ₹ 22 ಲಕ್ಷ ಪಡೆದು ವಂಚನೆ ಮಾಡಿದ್ದ. ಚಂದ್ರಪ್ಪ ಅವರು ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಹಿಂದೆಯೂ ವಂಚನೆ ನಡೆಸಿದ್ದ:

ಆರೋಪಿ ಗಂಗಾಧರ 2015ರಲ್ಲೂ ವಂಚನೆ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ. ಆಗ ತಾನು ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು ಜನರಿಂದ ಹಣ ಪಡೆದು ಮೋಸ ಮಾಡಿದ್ದ. ಈ ಬಗ್ಗೆಯೂ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !