ಸೋಮವಾರ, ಜೂಲೈ 6, 2020
24 °C

ದೈಹಿಕ ಸಂಪರ್ಕ ಬೆಳೆಸಿ ಕೈಕೊಟ್ಟ ಪಿಡಿಒ: ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದ ಪಿಡಿಒ ಬಳಿಕ ಕೈಕೊಟ್ಟಿದ್ದಾನೆ ಎಂದು ನೊಂದ ಯುವತಿ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.

ಶಾಮನೂರಿನ ವಿಭಿನ್ನ ಜಾತಿಯ ಈ ಜೋಡಿಯಲ್ಲಿ ಹುಡುಗಿ ಪರಿಶಿಷ್ಟ ಪಂಗಡಕ್ಕೆ ಸೇರಿದವರು. ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಯುವಕ ಪರಮೇಶ್ವರಪ್ಪನಿಗೆ ಅನುಕಂಪದ ಆಧಾರದಲ್ಲಿ ಪಿಡಿಒ ಉದ್ಯೋಗ ಸಿಕ್ಕಿತ್ತು. ಉದ್ಯೋಗ ಸಿಕ್ಕಿದ ಮೇಲೆ ಕೈಕೊಟ್ಟಿದ್ದಾನೆ. ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿರುವ ಆರೋಪಿ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಯುವತಿ ಮಹಿಳಾ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಡಿವೈಎಸ್‌ಪಿ ನಾಗೇಶ್‌ ಐತಾಳ್‌ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.