ಗುರುವಾರ , ಆಗಸ್ಟ್ 11, 2022
24 °C

ದಾವಣಗೆರೆ: ಸ್ವಾತಂತ್ರ್ಯ ಹೋರಾಟಗಾರ ಬಾಳೆಹೊಲದ ಮರುಳಸಿದ್ಧಪ್ಪ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದ ಎಂಸಿಸಿ ‘ಬಿ’ ಬ್ಲಾಕ್‌ ನಿವಾಸಿ ಬಾಳೆಹೊಲದ ಮರುಳಸಿದ್ಧಪ್ಪ(89) ಹೃದಯಾಘಾತದಿಂದ ಬುಧವಾರ ನಿಧನರಾದರು.

ಮರುಳಸಿದ್ಧಪ್ಪ ಅವರು ಎಳವೆಯಲ್ಲಿಯೇ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದರು. ಚಲೇಜಾವ್‌ ಚಳವಳಿಯಲ್ಲಿ ತನ್ನ ಚಿಕ್ಕಪ್ಪನ ಜತೆಗೆ ಭಾಗವಹಿಸಿದ್ದಲ್ಲದೇ ರೈಲಿಗೆ ಬೆಂಕಿ ಹಚ್ಚಿದ ಕೃತ್ಯದಲ್ಲಿಯೂ ಭಾಗಿಯಾಗಿದ್ದರು.‌

ಸ್ವಾತಂತ್ರ್ಯ ಹೊರಾಟಗಾರರ ಸಂಘದ ಅಧ್ಯಕ್ಷರಾಗಿರುವ ಅವರು ವರ್ತಕರೂ ಆಗಿದ್ದರು. ಅವರಿಗೆ ಪತ್ನಿ, ನಾಲ್ವರು ಪುತ್ರರು, ನಾಲ್ವರು ಪುತ್ರಿಯರು ಇದ್ದಾರೆ. ಕಕ್ಕರಗೊಳ್ಳ ಬಳಿ ಇರುವ ಸ್ವಂತ ಜಮೀನಿನಲ್ಲಿ ಅವರ ಅಂತ್ಯಕ್ರಿಯೆ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು