ಸೋಮವಾರ, ಸೆಪ್ಟೆಂಬರ್ 27, 2021
28 °C

ಐರ್ಲೆಂಡ್ ಕನ್ನಡಿಗರಿಗೆ ಸ್ವಾತಂತ್ರ್ಯದ ಕಥೆ

ಕೆ.ಎಸ್. ವೀರೇಶ್ ಪ್ರಸಾದ್ Updated:

ಅಕ್ಷರ ಗಾತ್ರ : | |

Prajavani

ಸಂತೇಬೆನ್ನೂರು: ಡಬ್ಲಿನ್‌ ನಗರದಲ್ಲಿರುವ ಕನ್ನಡಿಗರು ಐರ್ಲೆಂಡ್‌ನಲ್ಲಿರುವ ಕನ್ನಡಿಗರ ಮಕ್ಕಳಿಗೆ ಆನ್‌ಲೈನ್‌ನಲ್ಲಿ ಅನಿಮೇಷನ್ ಮೂಲಕ ಸ್ವಾತಂತ್ರ್ಯ ಹೋರಾಟದ ಕಥೆಗಳನ್ನು ಹೇಳುವ ಮೂಲಕ ರಾಷ್ಟ್ರಪ್ರೇಮ ಮೆರೆದಿದ್ದಾರೆ.

ಬಂಟ್ವಾಳದ ಹೆಸರಾಂತ ಚಿತ್ರಕಾರ ಶಿವಾನಂದ್ ಅವರು ವರ್ಚುವಲ್‌ ಮೀಟಿಂಗ್‌ನಲ್ಲಿ ಭಾಗವಹಿಸಿ ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದ ಪರಿಯನ್ನು ವಿವರಿಸಿದರು ಎಂದು ಡಬ್ಲಿನ್‌ನಲ್ಲಿ ನೆಲೆಸಿರುವ ಇಲ್ಲಿನ ತಣಿಗೆರೆ ಗ್ರಾಮದ ಸಾಫ್ಟ್‌ವೇರ್ ಎಂಜಿನಿಯರ್ ಕಾಂತೇಶ್ ಮಾಹಿತಿ ನೀಡಿದ್ದಾರೆ.

ಕೋವಿಡ್‌ನಿಂದಾಗಿ ಕನ್ನಡ ಕಲಿಕೆಯ ತರಗತಿಗಳಿಗೆ ಹಿನ್ನಡೆ ಉಂಟಾಗಿತ್ತು. ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಕಲಿಕೆಗೆ ವಿಶೇಷ ರೀತಿಯಲ್ಲಿ ಮತ್ತೆ ಚಾಲನೆ ನೀಡಲಾಯಿತು ಎಂದು ಅವರು ವಿವರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು