ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರೀಡೆಯಿಂದ ಆರೋಗ್ಯ, ನೆಮ್ಮದಿ

ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಡಾ.ಶರಣಪ್ಪ.ವಿ ಹಲಸೆ
Last Updated 9 ಡಿಸೆಂಬರ್ 2019, 15:27 IST
ಅಕ್ಷರ ಗಾತ್ರ

ದಾವಣಗೆರೆ: ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಒತ್ತಡದ ಜೀವನದಿಂದ ಮುಕ್ತಿ ದೊರೆತು ಉತ್ತಮ ಆರೋಗ್ಯ ಸಿಗುತ್ತದೆ. ಕ್ರೀಡೆಗಳಲ್ಲಿ ಸೋಲು-ಗೆಲುವು ಸಹಜ. ಆದ್ದರಿಂದ ಅವುಗಳನ್ನು ಸಮಚಿತ್ತದಿಂದ ಸ್ವೀಕರಿಸಬೇಕು ಎಂದು ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಡಾ.ಶರಣಪ್ಪ.ವಿ ಹಲಸೆ ಹೇಳಿದರು.

ಜಿಲ್ಲಾ ಪೊಲೀಸ್ ಇಲಾಖೆಯಿಂದ ಇಲ್ಲಿನ ಡಿಎಆರ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ ವಾರ್ಷಿಕ ಪೊಲೀಸ್ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆರೋಗ್ಯ, ನೆಮ್ಮದಿ ಇದ್ದರೆ ಏನು ಬೇಕಾದರೂ ಸಾಧನೆ ಮಾಡಬಹುದು. ಇವೆರಡೂ ಕ್ರೀಡೆಯಿಂದ ಸಿಗುತ್ತವೆ. ಪೊಲೀಸರು ಒತ್ತಡದ ಜೀವನ ನಡೆಸುತ್ತಿದ್ದು, ವರ್ಷಕ್ಕೆ ಒಂದು ಅಥವಾ ಎರಡು ಬಾರಿ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವುದರಿಂದ ಒತ್ತಡ ನಿವಾರಿಸಿಕೊಳ್ಳಬಹುದು. ಪ್ರೀತಿ ಮತ್ತು ವಿಶ್ವಾಸದಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಿ ಎಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ‘ಮನಸ್ಸು ತಣ್ಣಗಿದ್ದರೆ, ದೇಹ ತಂಪಾಗಿರುತ್ತದೆ. ಆದ್ದರಿಂದ ದೇಹವನ್ನು ತಂಪಾಗಿರಿಸಲು ವಿವಿಧ ಕ್ರೀಡಾ ಚಟುವಟಿಕೆಯಲ್ಲಿ ತೊಡಗಬೇಕು. ಯಾವ ವ್ಯಕ್ತಿಯು ತಮ್ಮ ಕೆಲಸವನ್ನು ಸಂತೋಷದಿಂದ ಮಾಡುತ್ತಾನೋ ಅವನು ಕೆಲಸಗಾರನಾಗುತ್ತಾನೆ. ತಾತ್ಸಾರ ಮನೋಭಾವದಿಂದ ಮಾಡಿದರೆ ಗುಲಾಮಗಿರಿ ಆಗುತ್ತದೆ. ಆದ್ದರಿಂದ ಕೆಲಸದಲ್ಲೇ ನಾವು ನೆಮ್ಮದಿಯನ್ನು ಕಾಣಬಹುದುಟ ಎಂದು ತಿಳಿಸಿದರು.

ಕ್ರೀಡಾಕೂಟದಲ್ಲಿ ದಾವಣಗೆರೆ ನಗರ ಉಪವಿಭಾಗ, ಗ್ರಾಮಾಂತರ ಉಪವಿಭಾಗ, ಹರಪನಹಳ್ಳಿ ನಗರ ಉಪವಿಭಾಗ, ಜಿಲ್ಲಾ ಸಶಸ್ತ್ರ ಮೀಸಲು ಪಡೆ ಹಾಗೂ ಜಿಲ್ಲಾ ಮಹಿಳಾ ಪೊಲೀಸ್ ತಂಡಗಳಿಂದ 105 ಕ್ರೀಡಾಪಟುಗಳು ಭಾಗಿಯಾಗಿದ್ದರು.

ಇದೇ ಸಂದರ್ಭದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಕ್ರೀಡೆಯಲ್ಲಿ ಸಾಧನೆ ಮಾಡಿದ ಗುರುಶಾಂತಪ್ಪ ಹಾಗೂ ಅಣ್ಣಪ್ಪ, ಒಂದೇ ಕುಟುಂಬದ ಮಕ್ಕಳಾದ ಗೌರಿ, ಗೌತಮಿ ಮತ್ತು ಗಾನವಿ ಅವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಗ್ರಾಮಾಂತರ ಡಿವೈಎಸ್‍ಪಿ ಮಂಜುನಾಥ ಗಂಗಲ್, ಎಎಸ್‌ಪಿ ಎಂ. ರಾಜೀವ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT