ಗುರುವಾರ , ಜೂನ್ 17, 2021
22 °C

ದಾವಣಗೆರೆ: ಮೇ 21ರಿಂದ ಸಂಪೂರ್ಣ ಲಾಕ್‌ಡೌನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಜಿಲ್ಲೆಯಲ್ಲಿ ಮೇ 21ರಂದು ಬೆಳಿಗ್ಗೆ 10ರಿಂದ ಮೇ 24ರಂದು ಬೆಳಿಗ್ಗೆ 6ರವರೆಗೆ ಸಂಪೂರ್ಣ ಲಾಕ್‌ಡೌನ್‌ ಜಾರಿ ಮಾಡಲು ಸೂಚಿಸಿದ್ದೇನೆ. ಈ ಬಗ್ಗೆ ಜಿಲ್ಲಾಧಿಕಾರಿ ಅಧಿಕೃತ ಸೂಚನೆ ಹೊರಡಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ತಿಳಿಸಿದರು.

ಔಷಧ ಇರುತ್ತದೆ. ಹಾಲು ಮೊಟ್ಟೆ ಮುಂತಾದವುಗಳಿಗೆ ಬೆಳಿಗ್ಗೆ 10ರವರೆಗೆ ಅವಕಾಶ ಇದೆ. ತರಕಾರಿ ಒಂದು ಕಡೆ ಇಟ್ಟು ಮಾರಾಟ ಮಾಡುವಂತಿಲ್ಲ. ತಳ್ಳು ಗಾಡಿಯಲ್ಲಿ ಒಯ್ಯಬಹುದು. ಹೋಟೆಲ್‌ಗಳಲ್ಲಿ ಪಾರ್ಸೆಲ್‌ ಮಾತ್ರ ಇರುತ್ತದೆ. ಇಲ್ಲಿವರೆಗೆ ಬೆಳಿಗ್ಗೆ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಇತ್ತು. ನಾಳೆ 10 ಗಂಟೆಯ ನಂತರ ಸೋಮವಾರದ ವರೆಗೆ ಅವಕಾಶ ಇಲ್ಲ. ಮುಂದಿನ ಲಾಕ್‌ಡೌನ್‌ ಬಗ್ಗೆ ಮೇ 24ರಂದು ಮುಖ್ಯಮಂತ್ರಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು