ಚನ್ನಗಿರಿ: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಗಣೇಶ ಹಬ್ಬವನ್ನು ಶನಿವಾರ ಸಡಗರದಿಂದ ಆಚರಿಸಲಾಯಿತು.
ಬೆಳಿಗ್ಗೆಯೇ ಮನೆಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು. ಹಬ್ಬದ ಅಂಗವಾಗಿ ವಿಶೇಷ ಪೂಜೆ ನಡೆಸಿದರು. ನೈವೇದ್ಯಕ್ಕಾಗಿ ಗಣೇಶನಿಗೆ ಪ್ರಿಯವಾದ ಮೋದಕ, ಹೋಳಿಗೆ, ಒಬ್ಬಟ್ಟು, ಚಕ್ಕುಲಿ, ಕೋಡುಬಳೆ ಮುಂತಾದ ಪದಾರ್ಥಗಳನ್ನು ತಯಾರಿಸಿ ಭಕ್ತಿ ಸಮರ್ಪಿಸಿದರು.
ನಂತರ ಮನೆಯವರೊಂದಿಗೆ ಸೇರಿ ಭೋಜನ ಸವಿದರು. ಎಲ್ಲ ಸಮುದಾಯದವರು ಸೇರಿ ಹಬ್ಬವನ್ನು ಆಚರಿಸಿದರು. ತಾಲ್ಲೂಕಿನ ಎಲ್ಲೆಡೆ ಸಾರ್ವಜನಿಕ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದ್ದು, ಗಮನ ಸೆಳೆಯುತ್ತಿವೆ.