ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗಣೇಶೋತ್ಸವ: ಅನುಮತಿಗೆ ಏಕಗವಾಕ್ಷಿ ವ್ಯವಸ್ಥೆ’

Last Updated 7 ಸೆಪ್ಟೆಂಬರ್ 2021, 2:43 IST
ಅಕ್ಷರ ಗಾತ್ರ

ದಾವಣಗೆರೆ: ಗಣೇಶೋತ್ಸವ ಆಚರಣೆಗೆ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದ್ದು, ಜಿಲ್ಲೆಯಲ್ಲಿಯೂ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಬೇಕು. ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ವಿವಿಧ ಇಲಾಖೆಗಳಿಂದ ಪಡೆಯಲಾಗುವ ಅನುಮತಿಯನ್ನು ಒಂದೇ ಕಡೆ ಒದಗಿಸಲು ಏಕಗವಾಕ್ಷಿ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಗಣೇಶೋತ್ಸವ ಆಚರಣೆ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಗಣೇಶಮೂರ್ತಿ ಪ್ರತಿಷ್ಠಾಪನೆ ಮಾಡುವ ಆಯೋಜಕರು ಕೋವಿಡ್ ನೆಗೆಟಿವ್ ವರದಿ ಮತ್ತು ಕನಿಷ್ಠ ಮೊದಲ ಡೋಸ್ ಲಸಿಕೆ ಪಡೆದಿರುವ ಪ್ರಮಾಣಪತ್ರ ಹೊಂದಿರುವುದು ಕಡ್ಡಾಯ. ಗಣೇಶಮೂರ್ತಿ ಪ್ರತಿಷ್ಠಾಪಿಸಲು ಸಂಬಂಧಪಟ್ಟ ಅಧಿಕಾರಿಗಳಿಂದ ಅನುಮತಿ ಪಡೆಯುವುದೂ ಕಡ್ಡಾಯ. ನಗರ ವ್ಯಾಪ್ತಿಯಲ್ಲಿ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಆಯಾ ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿ ಕಚೇರಿ, ಗ್ರಾಮ ಮಟ್ಟದಲ್ಲಿ ಆಯಾ ಗ್ರಾಮ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಪಿಡಿಒಗಳಿಂದ ಅನುಮತಿ ಪಡೆಯಬೇಕು. ಮಾಲಿನ್ಯ ನಿಯಂತ್ರಣ ಮಂಡಳಿ, ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆ ಹಾಗೂ ಇತರೆ ಇಲಾಖೆಗಳಿಂದ ಪಡೆಯಬೇಕಾದ ಅನುಮತಿ ಪತ್ರ ಒಂದೇ ಕಡೆ ನೀಡಲು ಪಾಲಿಕೆ ಸೇರಿ ಸ್ಥಳೀಯ ಸಂಸ್ಥೆಗಳ ಕಚೇರಿಯಲ್ಲಿಯೇ ಏಕಗವಾಕ್ಷಿ ವ್ಯವಸ್ಥೆ ಮಾಡಲಾಗುವುದು ಎಂದರು.

ಆಯೋಜಕರು ಮಾರ್ಗಸೂಚಿ ಪಾಲಿಸುತ್ತಿರುವ ಬಗ್ಗೆಯೂ ನಿಗಾ ವಹಿಸಿ, ಉಲ್ಲಂಘನೆ ಮಾಡುವವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಎಎಸ್‌ಪಿ ರಾಜೀವ್, ಹೆಚ್ಚುವರಿ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್ ಹಾಗೂ ತಹಶೀಲ್ದಾರರು, ನಗರಸಭೆ, ಪುರಸಭೆ ಮುಖ್ಯಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT