ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಗಳೂರಿನಲ್ಲಿ ಗಾರ್ಮೆಂಟ್ ಫ್ಯಾಕ್ಟರಿ ಆರಂಭಕ್ಕೆ ಚಿಂತನೆ

ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಭರವಸೆ
Published 30 ಏಪ್ರಿಲ್ 2024, 6:33 IST
Last Updated 30 ಏಪ್ರಿಲ್ 2024, 6:33 IST
ಅಕ್ಷರ ಗಾತ್ರ

ದಾವಣಗೆರೆ: ‘ರಾಜ್ಯ ಸರ್ಕಾರದ ‘ಗೃಹಲಕ್ಷ್ಮಿ’ ಯೋಜನೆ ಹಣ ಮತ್ತು ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ನೀಡಲಿರುವ ‘ಮಹಾಲಕ್ಷ್ಮಿ’ ಈ ಎರಡೂ ಯೋಜನೆಗಳಿಂದ ಮಹಿಳೆಯರ ಬಾಳಿನಲ್ಲಿ ಹೊಸ ಚೈತನ್ಯ ಮೂಡಲಿದೆ’ ಎಂದು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ನವೋದಯ ಗ್ರಾಮ ವಿಕಾಸ ಚಾರಿಟಬಲ್ ಟ್ರಸ್ಟ್ ವತಿಯಿಂದ ಇಲ್ಲಿನ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ಸೋಮವಾರ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಗೃಹಲಕ್ಷ್ಮಿ’ ಯೋಜನೆಯಡಿ ಬರುತ್ತಿರುವ ಹಣ ಆ ಕುಟುಂಬದ ಮಕ್ಕಳ ವಿದ್ಯಾಭ್ಯಾಸ, ಆರೋಗ್ಯ ಸಮಸ್ಯೆ ಅಥವಾ ದಿನಬಳಕೆಗೋ ವಿನಿಯೋಗವಾಗುತ್ತಿದೆ. ಈ ರೀತಿಯ ಸೌಲಭ್ಯವನ್ನು ರಾಜ್ಯದ ಲಕ್ಷಾಂತರ ಮಹಿಳೆಯರು ಪಡೆದುಕೊಳ್ಳುತ್ತಿರುವುದು ಶ್ಲಾಘನೀಯ’ ಎಂದರು.

‘ರಾಜ್ಯದಲ್ಲಿ ನಮ್ಮದೇ ಸರ್ಕಾರವಿದೆ. ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಹರಪನಹಳ್ಳಿ ಸೇರಿ ಎಂಟು ವಿಧಾನಸಭಾ ಕೇತ್ರಗಳಲ್ಲಿ ಎಂಟು ಶಾಸಕರಿದ್ದಾರೆ. ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಇದ್ದಾರೆ. ಆದರೆ ಲೋಕಸಭಾ ಸದಸ್ಯರ ಕೊರತೆ ಕಾಡುತ್ತಿದೆ. ಈ ಕೊರತೆ ನೀಗಿಸುವ ಸಲುವಾಗಿ ಎಲ್ಲರೂ ಕಾಂಗ್ರೆಸ್‌ ಅನ್ನು ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.

‘ದೇಶದಲ್ಲಿ ಸ್ತ್ರೀಶಕ್ತಿ ಸಂಘಗಳ ಪರಿಕಲ್ಪನೆಯನ್ನು ಆರಂಭಿಸಿದ್ದೇ ಕಾಂಗ್ರೆಸ್ ಸರ್ಕಾರ. ಆ ಮೂಲಕ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಮುನ್ನುಡಿ ಬರೆಯಿತು. ಇದೇ ಮಾದರಿಯಲ್ಲಿ ಕಾಂಗ್ರೆಸ್ ಮೊದಲ ಬಾರಿಗೆ ಮಹಿಳೆಯರಿಗೆ ಎಲ್ಲಾ ಕ್ಷೇತ್ರದಲ್ಲೂ ಹೆಚ್ಚಿನ ಅವಕಾಶ ಕಲ್ಪಿಸಿದೆ. ಜಗಳೂರು ಭಾಗದಲ್ಲಿ ಸಾಕಷ್ಟು ಮಹಿಳೆಯರು ಗಾರ್ಮೆಂಟ್ ಗಳಲ್ಲಿ ಕೆಲಸ ಮಾಡಲು ಬೆಂಗಳೂರಿಗೆ ಹೋಗಿದ್ದಾರೆ. ಈ ನಿಟ್ಟಿನಲ್ಲಿ ಜಗಳೂರಿನಲ್ಲಿ ಗಾರ್ಮೆಂಟ್ ಫ್ಯಾಕ್ಟರಿ, ದಾವಣಗೆರೆಯಲ್ಲಿ ಸಾಫ್ಟ್‌ವೇರ್‌ ಟೆಕ್ನಾಲಜಿ ಪಾರ್ಕ್ ಸ್ಥಾಪಿಸುವ ಚಿಂತನೆ ಇದೆ’ ಎಂದರು.

ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಮಾತನಾಡಿ, ‘ಕಾಂಗ್ರೆಸ್ ಪಕ್ಷ ಮಹಿಳೆಯರ ಸಬಲೀಕರಣಕ್ಕೆ ಒತ್ತು ನೀಡಿದ್ದು, ರಾಜ್ಯ ಸರ್ಕಾರದ ವಿವಿಧ ಯೋಜನೆಗಳಿಂದ ಮಾಸಿಕ ಪ್ರತಿ ಕುಟುಂಬಕ್ಕೆ 6 ಸಾವಿರ ಉಳಿತಾಯವಾಗುತ್ತಿದ್ದು, ಈ ಹಣದಿಂದ ಮಕ್ಕಳಿಗೆ ಆರೋಗ್ಯ, ಉತ್ತಮ ಶಿಕ್ಷಣ ಕೊಡಿಸಲು ಅನುಕೂಲವಾಗಿದೆ. ರಾಜ್ಯದಲ್ಲಿ 6 ಮಹಿಳೆಯರು ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದು, ಅವರೆಲ್ಲರೂ ಗೆಲುವು ಸಾಧಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಕಾಂಗ್ರೆಸ್‌ನ ಅಭಿವೃದ್ಧಿ ಕಾರ್ಯಕ್ರಮಗಳೇ ಅಭ್ಯರ್ಥಿ ಗೆಲುವಿಗೆ ಕಾರಣವಾಗಲಿವೆ. ಇತರೆ ಪಕ್ಷಗಳಂತೆ ಸುಳ್ಳು ಹೇಳಿ ಜನರನ್ನು ದಾರಿ ತಪ್ಪಿಸದೆ ಎಸ್.ಎಸ್. ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಈ ಬಾರಿ ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಡಾ.ಪ್ರಭಾ ಮಲ್ಲಿಕಾರ್ಜುನ್ ಗೆಲುವು ಸಾಧಿಸಲಿದ್ದಾರೆ’ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಜೆ.ಆರ್.ಷಣ್ಮುಖಪ್ಪ 

ಪ್ರಭಾ ಮಲ್ಲಿಕಾರ್ಜುನ್‌ ಅವರಿಗೆ ಬೆಂಬಲ ಸೂಚಿಸಿ ನವೋದಯ ಗ್ರಾಮ ವಿಕಾಸ ಟ್ರಸ್ಟಿನ 6000ಕ್ಕೂ ಹೆಚ್ಚು ಮಹಿಳೆಯರು ಇಲ್ಲಿ ಸೇರಿದ್ದು, ಈ ಬಾರಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಾಪೂಜಿ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಸದಸ್ಯೆ ಕಿರುವಾಡಿ ಗಿರಿಜಮ್ಮ ಅಧ್ಯಕ್ಷತೆ ವಹಿಸಿದ್ದರು. ಚಿಕ್ಕಮಗಳೂರು ಶಾಸಕ ಡಿ.ಸಿ. ತಮ್ಮಣ್ಣ, ಕಾಂಗ್ರೆಸ್ ಮುಖಂಡರಾದ ಅಣಬೇರು ರಾಜಣ್ಣ, ಐಗೂರು ಚಂದ್ರಶೇಖರ್, ಕಲಪನಹಳ್ಳಿ ಸೋಮಶೇಖರಪ್ಪ, ಕಕ್ಕರಗೊಳ್ಳ ಕಲ್ಲಿಂಗಪ್ಪ, ಎಚ್.ಎಸ್.ಮಂಜುನಾಥ ಕುರ್ಕಿ, ವೀಣಾ, ಮಮತಾ, ರೇಣುಕಾ, ಬಸಮ್ಮ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT