ಚಳ್ಳಕೆರೆ: ತಾಲ್ಲೂಕಿನ ಗ್ರಾಮವೊಂದರ ಯುವಕ ಮಂಜುನಾಥ (25) ಅದೇ ಗ್ರಾಮದ 17 ವರ್ಷದ ಬಾಲಕಿಯನ್ನು ಬಲವಂತವಾಗಿ ಕರೆದುಕೊಂಡು ಹೋಗಿ ವಿವಾಹವಾಗಿ ಲೈಂಗಿಕ ದೌರ್ಜನ್ಯವೆಸಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಯ ವಿವರ: ನವೆಂಬರ್ 9ರಂದು ಮಂಜುನಾಥ ಬಾಲಕಿಯನ್ನು ಪುಸಲಾಯಿಸಿ ತನ್ನ ಬೈಕ್ ನಲ್ಲಿ ಹತ್ತಿಸಿಕೊಂಡು ಪಾವಗಡ ತಾಲ್ಲೂಕಿನ ಬೆಳ್ಳಿಬಟ್ಲು ಗ್ರಾಮದ ತನ್ನ ಸ್ನೇಹಿತನ ಮನೆಗೆ ಕರೆದುಕೊಂಡು ಬಂದಿದ್ದಾನೆ. ಅಂದೇ ಶೈಲಾಪುರ ಗ್ರಾಮದ ಆಂಜನೇಯ ದೇವಾಲಯದಲ್ಲಿ ವಿವಾಹವಾಗಿದ್ದಾನೆ. ನಂತರ ಬಾಲಕಿಯ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.

ಮಗಳು ಕಾಣೆಯಾಗಿದ್ದಾಳೆ ಎಂದು ಬಾಲಕಿಯ ಪೋಷಕರು ಚಳ್ಳಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನವೆಂಬರ್ 13ರಂದು ಬಾಲಕಿಯು ಯುವಕನೊಂದಿಗೆ ಪರುಶುರಾಂಪುರದಲ್ಲಿ ಪತ್ತೆಯಾಗಿದ್ದು, ಠಾಣೆಯ ಪಿಎಸ್ಐ ಪಿ.ಆರ್.ರಾಘವೇಂದ್ರ ನೇತೃತ್ವದ ತಂಡ ಬಾಲಕಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿ ಸಿದಾಗ ನಡೆದ ಘಟನೆಯನ್ನು ವಿವರಿಸಿದ್ದಾಳೆ.
ಮಂಜುನಾಥನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪೊಲೀಸರು ದೂರು ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಬಾಲಕಿಯನ್ನು ಚಿತ್ರದುರ್ಗದ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.