ಸೋಮವಾರ, ಆಗಸ್ಟ್ 2, 2021
28 °C

‘ಮಿಸ್‌–ಸಿ’ಯಿಂದ ಬಾಲಕಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ನಗರದ ಎಸ್‌.ಎಸ್‌. ಆಸ್ಪತ್ರೆಯಲ್ಲಿ ಮಿಸ್‌–ಸಿ (ಎಂಐಎಸ್‌–ಸಿ) ರೋಗದಿಂದ 5 ವರ್ಷದ ಬಾಲಕಿಯೊಬ್ಬಳು ಶುಕ್ರವಾರ ಮೃತಪಟ್ಟಿದ್ದಾಳೆ.

‘ಶಿರಾ ಮೂಲದ ಹಳ್ಳಿಯೊಂದರ ಬಾಲಕಿಯಾಗಿರುವ ಈಕೆಯನ್ನು ಹಿರಿಯೂರು ಆಸ್ಪತ್ರೆಯ ಬಳಿಕ ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಎಸ್‌.ಎಸ್‌. ಆಸ್ಪತ್ರೆಗೆ ಕಳುಹಿಸಿಕೊಡಲಾಗಿತ್ತು. ಆಸ್ಪತ್ರೆಗೆ ದಾಖಲಿಸಿದಾಗಲೇ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಈ ಬಾಲಕಿ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾಳೆ’ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.