ದಾವಣಗೆರೆ: ಬೀದಿ ನಾಯಿ ಕಚ್ಚಿ ಗಾಯಗೊಂಡು ನಾಲ್ಕು ತಿಂಗಳಿಂದ ಆಸ್ಪತ್ರೆಯಲ್ಲಿದ್ದ ಬಾಲಕಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದೆ.

ನಗರದ ಶಾಸ್ತ್ರಿ ಬಡಾವಣೆಯ ಖದೀರಾ ಬಾನು (4) ಮೃತ ಬಾಲಕಿ. ನಾಯಿ ಕಚ್ಚಿದ್ದರಿಂದ ರೇಬಿಸ್ ಖಾಯಿಲೆ ಕಾಣಿಸಿಕೊಂಡು ಬಾಲಕಿ ಮೃತಪಟ್ಟಿದೆ.

ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ ಬಾಲಕಿಯ ಮೇಲೆ ಬೀದಿ ನಾಯಿ ದಾಳಿ ನಡೆಸಿತ್ತು. ಮುಖ ಸೇರಿದಂತೆ ದೇಹದ ಹಲವು ಭಾಗಗಳನ್ನು ಕಚ್ಚಿ ಗಾಯಗೊಳಿಸಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಭಾನುವಾರ ರಾತ್ರಿ ಮೃತಪಟ್ಟಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
.ಬೀದಿ ನಾಯಿ ಉಪಟಳಕ್ಕೆ ಕಡಿವಾಣ | ಎಲ್ಲರೂ ಹೊಣೆ ನಿಭಾಯಿಸಬೇಕು; ಸುಪ್ರೀಂ ಕೋರ್ಟ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.