ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೊನ್ನಾಳಿ: ಬಾಲಕಿಯರ ವಸತಿ ನಿಲಯ ಸ್ಥಳಾಂತರ

Published : 13 ಸೆಪ್ಟೆಂಬರ್ 2024, 13:38 IST
Last Updated : 13 ಸೆಪ್ಟೆಂಬರ್ 2024, 13:38 IST
ಫಾಲೋ ಮಾಡಿ
Comments

ಹೊನ್ನಾಳಿ: ನ್ಯಾಮತಿ ತಾಲ್ಲೂಕಿನ ಚೀಲೂರು ಕಡದಕಟ್ಟೆ ಗ್ರಾಮದಲ್ಲಿದ್ದ ಹಿಂದುಳಿದ ವರ್ಗಗಳ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯವನ್ನು ಹಿರೇಮಠ ಗ್ರಾಮದಲ್ಲಿರುವ ಚನ್ನಪ್ಪ ಸ್ವಾಮಿ ಮಠದ ಕಟ್ಟಡಕ್ಕೆ ಶುಕ್ರವಾರ ಸ್ಥಳಾಂತರಿಸಲಾಯಿತು.

ನೂತನ ವಸತಿ ನಿಲಯವನ್ನು ಶಾಸಕ ಡಿ.ಜಿ.ಶಾಂತನಗೌಡ ಅವರು ಉದ್ಘಾಟಿಸಿ, ‘ಎಲ್ಲ ವಿದ್ಯಾರ್ಥಿಗಳಿಗೂ ಅನುಕೂಲವಾಗುವ ಉದ್ದೇಶದಿಂದ ಈ ನಿಲಯವನ್ನು ಸ್ಥಳಾಂತರ ಮಾಡಲಾಗಿದೆ’ ಎಂದು ತಿಳಿಸಿದರು.

ಹಿರೇಕಲ್ಮಠದ ಶ್ರೀಗಳು ಪೂಜೆ ಸಲ್ಲಿಸಿದರು. ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಮೃತ್ಯುಂಜಯ ಸ್ವಾಮಿ, ದೇವನಾಯಕನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎ.ಜಿ.ಪ್ರಕಾಶ್, ಮಠದ ವ್ಯವಸ್ಥಾಪಕ ಚನ್ನಬಸಪ್ಪ ಹಾಗೂ ಇಲಾಖೆಯ ಸಿಬ್ಬಂದಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT