ಭಾನುವಾರ, ಜೂನ್ 20, 2021
25 °C

₹ 2ಲಕ್ಷ ಮೌಲ್ಯದ ಚಿನ್ನದ ಸರ ಕಸಿದು ಪರಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಇಲ್ಲಿನ ಪಿ.ಜೆ.ಬಡಾವಣೆಯ ಮುದ್ದಳ್ಳಿ ತೋಟದ ಜೊಳ್ಳಿ ಕಾಂಪೌಂಡ್ ಬಳಿ ಬೈಕ್‌ನಲ್ಲಿ ಬಂದ ಕಳ್ಳರು ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಕುತ್ತಿಗೆಯಿಂದ ₹ 2ಲಕ್ಷ ಮೌಲ್ಯದ ಬಂಗಾರದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.  

ಲಕ್ಷ್ಮಿ ಅಳ್ಳೊಳ್ಳಿ ಸರ ಕಳೆದುಕೊಂಡವರು. ಕಿರಾಣಿ ಅಂಗಡಿಯಲ್ಲಿ ದಿನಸಿ ಖರೀದಿಸಿ ಮನಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್‌ನಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ವ್ಯಕ್ತಿ 40 ಗ್ರಾಂನ ₹1.60 ಲಕ್ಷ ಮೌಲ್ಯದ ಎರಡೆಳೆಯ ಥ್ರೀ ರಿಂಗ್ಸ್ ಕಟಿಂಗ್‌ನ ಬಂಗಾರದ ಸರ ಹಾಗೂ 10 ಗ್ರಾಂನ ₹ 40 ಸಾವಿರ ಮೌಲ್ಯದ ಒಂದೆಳೆ ಬಂಗಾರದ ಸರವನ್ನು ಕಿತ್ತುಕೊಂಡು ಹೋಗಿದ್ದಾರೆ.

ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.