ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: ಉತ್ತಮ ಮಳೆ; ₹ 63.50 ಲಕ್ಷ ನಷ್ಟ

Last Updated 18 ನವೆಂಬರ್ 2021, 3:08 IST
ಅಕ್ಷರ ಗಾತ್ರ

ದಾವಣಗೆರೆ: ನವೆಂಬರ್‌, ಡಿಸೆಂಬರ್‌ನಲ್ಲಿ ಮಳೆ ಬಂದರೆ ಏಪ್ರಿಲ್‌, ಮೇ ತಿಂಗಳಲ್ಲಿ ನೀರಿನ ಕೊರತೆ ಉಂಟಾಗಲ್ಲ ಎಂಬ ಜನರ ಅನುಭವದ ಮಾತಿಗೆ ಸರಿಯಾಗಿ ಕೆಲವು ದಿನಗಳಿಂದ ಮಳೆ ಸುರಿಯುತ್ತಿದೆ. ಮಂಗಳವಾರ ರಾತ್ರಿ, ಬುಧವಾರ ಮಧ್ಯಾಹ್ನ ಉತ್ತಮ ಮಳೆಯಾಗಿದೆ. ₹ 63.50 ಲಕ್ಷ ನಷ್ಟ ಉಂಟಾಗಿದೆ.

ದಾವಣಗೆರೆ ತಾಲ್ಲೂಕಿನಲ್ಲಿ 20 ಎಕರೆ ಭತ್ತದ ಬೆಳೆ ಹಾನಿಯಾಗಿದೆ. ಹರಿಹರ ತಾಲ್ಲೂಕಿಲ್ಲಿ 1 ಕಚ್ಚಾ ಮನೆಗೆ ಭಾಗಶಃ ಹಾನಿಯಾಗಿದೆ. 695 ಎಕರೆ ಭತ್ತದ ಬೆಳೆ ನಷ್ಟವಾಗಿದೆ.

ಹೊನ್ನಾಳಿ ತಾಲ್ಲೂಕಿನಲ್ಲಿ 3 ಪಕ್ಕಾ ಮನೆ, ನ್ಯಾಮತಿ ತಾಲ್ಲೂಕಿನಲ್ಲಿ 1 ಪಕ್ಕಾ ಮನೆ, ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 3 ಪಕ್ಕಾ ಮನೆ, 4 ಕಚ್ಚಾ ಮನೆಗಳಿಗೆ ಹಾನಿಯಾಗಿದೆ.

ಸರ್ಕಾರದ ಮಾರ್ಗಸೂಚಿಯ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಚನ್ನಗಿರಿ ತಾಲ್ಲೂಕಿನಲ್ಲಿ 19.48 ಮಿ.ಮೀ., ದಾವಣಗೆರೆ 05.61 ಮಿ.ಮೀ., ಹರಿಹರ 19.30 ಮಿ.ಮೀ., ಹೊನ್ನಾಳಿ 27.80 ಮಿ.ಮೀ, ಜಗಳೂರು ತಾಲ್ಲೂಕಿನಲ್ಲಿ 20.80 ಮಿ.ಮೀ. ಮಳೆಯಾಗಿದೆ.

ಮನೆಗೆ ನುಗ್ಗಿದ ನೀರು: ಹರಿಹರ ತಾಲ್ಲೂಕು ಹೊಳೆಸಿರಿಗೆರೆಯಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಕಾಲುವೆಗಳು ತುಂಬಿದ್ದರಿಂದ ಈ ಅವಾಂತರ ಉಂಟಾಗಿದ್ದು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರ ಮನೆ ಒಳಗೊಂಡಂತೆ ಹಲವು ಮನೆಗಳಿಗೆ ನೀರು ನುಗ್ಗಿ ದವಸ ಧಾನ್ಯಗಳು ಹಾಳಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT