ಮಂಗಳವಾರ, ಸೆಪ್ಟೆಂಬರ್ 21, 2021
26 °C

ಅಗಲಿದ ಯೋಧನಿಗೆ ಗೌರವದ ವಿದಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹರಪನಹಳ್ಳಿ: ಗಡಿ ಭದ್ರತಾ ಪಡೆಯಲ್ಲಿ (ಬಾರ್ಡರ್ ಸೆಕ್ಯುರಿಟಿ ಫೋರ್ಸ್) ಕರ್ತವ್ಯ ನಿರ್ವಹಿಸುತ್ತಿದ್ದ ತಾಲ್ಲೂಕಿನ ಕಸವನಹಳ್ಳಿ ಗ್ರಾಮದ ಯೋಧ ಬಂಡೇರ ವಸಂತ್ (39) ಶನಿವಾರ ರಾತ್ರಿ ನಿಧನರಾಗಿದ್ದಾರೆ.

ಅವರಿಗೆ ಪತ್ನಿ, ಇಬ್ಬರು ಮಕ್ಕಳು, ತಂದೆ, ತಾಯಿ, ನಾಲ್ವರು ಸಹೋದರರು ಇದ್ದಾರೆ. ವಸಂತ್ ಅವರು ಕಿಡ್ನಿ ವೈಫಲ್ಯದಿಂದ ಬಳ
ಲುತ್ತಿದ್ದರು. ಚಿಕಿತ್ಸೆಗಾಗಿ ರಜೆ ಪಡೆದು ಸ್ವಗ್ರಾಮಕ್ಕೆ ಮರಳಿದ್ದರು. ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಪೊಲೀಸ್ ಇಲಾಖೆಯಿಂದ ಗೌರವ ವಂದನೆ ಸಲ್ಲಿಸುವ ಮೂಲಕ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ಡಿವೈಎಸ್ಪಿ ವಿ.ಎಸ್. ಹಾಲಮೂರ್ತಿ, ಸಿಪಿಐ ನಾಗರಾಜ್ ಎಸ್. ಕಮ್ಮಾರ ಅವರ ಮಾರ್ಗದರ್ಶನ ಮೇರೆಗೆ ಅರಸೀಕೆರೆ ಠಾಣೆ ಪಿಎಸ್ಐ ನಾಗರತ್ನಮ್ಮ ನೇತೃತ್ವದಲ್ಲಿ ಪೊಲೀಸರ ತಂಡ ಗೌರವ ವಂದನೆ ಸಲ್ಲಿಸಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು