ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಫೋಟಕ್ಕೆ ಸರ್ಕಾರದ ನಿಷ್ಕ್ರೀಯತೆ ಕಾರಣ: ಈಶ್ವರ ಖಂಡ್ರೆ

Last Updated 26 ಫೆಬ್ರುವರಿ 2021, 2:23 IST
ಅಕ್ಷರ ಗಾತ್ರ

ದಾವಣಗೆರೆ: ಸರ್ಕಾರದ ನಿಷ್ಕೀಯತೆಯಿಂದಲೇ ರಾಜ್ಯದಲ್ಲಿ ಪದೇ ಪದೇ ಸ್ಫೋಟವಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆರೋಪಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಸ್ಫೋಟ ಆದಾಗಲೇ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು. ಆದರೆ ಸರ್ಕಾರ ಎಚ್ಚೆತ್ತುಕೊಳ್ಳದೇ ಇದ್ದಿದ್ದರಿಂದ ಮತ್ತೆ ಸ್ಫೋಟವಾಗಿದೆ. ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಇದರಿಂದ ರಾಜ್ಯದ ಜನ ಭೀತರಾಗಿದ್ದಾರೆ. ಇದು ರಾಜ್ಯದಲ್ಲಿ ಸರ್ಕಾರವೇ ಇಲ್ಲ ಎಂಬುದನ್ನು ತೋರಿಸಿಕೊಡುತ್ತದೆ ಎಂದು ನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಲೋಕಸಭೆ, ವಿಧಾನಸಭೆ ಉಪ ಚುನಾವಣೆ ಘೋಷಣೆ ಆಗಲಿದೆ. ನಾವು ಎಲ್ಲ ರೀತಿಯ ತಯಾರಿ ಮಾಡಿಕೊಂಡಿದ್ದೇವೆ. ಸರ್ಕಾರದ ರೈತ ವಿರೋಧಿ ನೀತಿ, ಜನ ವಿರೋಧಿ ನೀತಿ, ಯುವಕರ ವಿರೋಧಿ ನೀತಿ, ಪ್ರಜಾಪ್ರಭುತ್ವ ವಿರೋಧಿ ನೀತಿಗೆ ಜನರು ಪಾಠ ಕಲಿಸಲಿದ್ದಾರೆ. ದಿಶಾ ಎಂಬ ವಿದ್ಯಾರ್ಥಿನಿಯನ್ನು ಟೂಲ್‌ಕಿಟ್‌ ಮೂಲಕ ಷಡ್ಯಂತ್ರ ಮಾಡಿದ್ದಾರೆ ಎಂದು ಆರೋಪಿಸಿ ಬಂಧಿಸಿದ್ದರು. ಇದು ಯುವಕರಲ್ಲಿ ಭಯ ಹುಟ್ಟಿಸಿ, ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡುವ ಕೆಲಸ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT