ಶನಿವಾರ, ಏಪ್ರಿಲ್ 1, 2023
23 °C

ದಾವಣಗೆರೆಗೆ ಸರ್ಕಾರಿ ಮೆಡಿಕಲ್ ಕಾಲೇಜು: ಶಾಮನೂರು ಸ್ವಾಗತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ನಗರದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಪ್ರಾರಂಭಿಸುವ ಬಗ್ಗೆ ಸರ್ಕಾರದ ನಿರ್ಧಾರವನ್ನು ಶಾಸಕ, ಬಾಪೂಜಿ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಶಾಮನೂರು ಶಿವಶಂಕರಪ್ಪ ಸ್ವಾಗತಿಸಿದ್ದಾರೆ.

ದಾವಣಗೆರೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಆರಂಭವಾಗುವುದರಿಂದ ದಾವಣಗೆರೆ ಜಿಲ್ಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಸರ್ಕಾರ ಆದಷ್ಟು ಶೀಘ್ರವಾಗಿ ದಾವಣಗೆರೆಯಲ್ಲಿ ಮೆಡಿಕಲ್ ಕಾಲೇಜು ಆರಂಭಿಸುವಂತೆ ಒತ್ತಾಯಿಸಿರುವ ಅವರು, ಮೆಡಿಕಲ್ ಕಾಲೇಜು ಆರಂಭಕ್ಕೆ ಸಂಪೂರ್ಣ ಬೆಂಬಲವಿದೆ ಎಂದು ಹೇಳಿಕೆ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.