ಹಲಕನಾಳ್ (ಚನ್ನಗಿರಿ): ‘ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ರೈತರ ಪರವಾಗಿದ್ದು, ರೈತರ ಹಿತ ಕಾಪಾಡಲು ಹಾಗೂ ಆರ್ಥಿಕವಾಗಿ ಸಬಲೀಕರಣಗೊಳಿಸಲು ಕೃಷಿ ಇಲಾಖೆಯಿಂದ ಕೃಷಿ ಪರಿಕರಗಳನ್ನು ವಿತರಣೆ ಮಾಡಲಾಗುತ್ತಿದೆ’ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ತಿಳಿಸಿದರು.

ತಾಲ್ಲೂಕಿನ ಹಲಕನಾಳ್ ಗ್ರಾಮದಲ್ಲಿ ವಿಶ್ವ ಬ್ಯಾಂಕ್ ನೆರವಿನ ರಿವಾರ್ಡ್ ಯೋಜನೆ ಅಡಿ ರೈತ ಫಲಾನುಭವಿಗಳಿಗೆ ಕೃಷಿ ಪರಿಕರಗಳ ವಿತರಣೆ ಹಾಗೂ ಸ್ತ್ರೀ ಶಕ್ತಿ ಸ್ವ– ಸಹಾಯ ಸಂಘಗಳಿಗೆ ಸಹಾಯಧನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಎರಡು ಮೂರು ದಿನಗಳಿಂದ ಸಂತೇಬೆನ್ನೂರು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತರು ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ. ರೈತರಿಗೆ ಉತ್ತಮ ಗುಣಮಟ್ಟದ ರಸಗೊಬ್ಬರ ಹಾಗೂ ಬೀಜಗಳನ್ನು ನೀಡಬೇಕು. ಕಳಪೆ ಗುಣಮಟ್ಟದ ರಸಗೊಬ್ಬರ ಹಾಗೂ ಬೀಜಗಳನ್ನು ಮಾರಾಟ ಮಾಡುವವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು. ಈಗಾಗಲೇ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ತಾಲ್ಲೂಕಿನಲ್ಲಿ ಯಾವುದೇ ರೀತಿಯ ರಸಗೊಬ್ಬರ ಹಾಗೂ ಬೀಜದ ಕೊರತೆ ಇರುವುದಿಲ್ಲ. ಆಯಾ ರೈತ ಸಂಪರ್ಕ ಕೇಂದ್ರಗಳಲ್ಲಿ ಬೀಜ ವಿತರಣೆ ಕಾರ್ಯ ನಡೆಯುತ್ತಿದೆ’ ಎಂದು ತಿಳಿಸಿದರು.

‘30ಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಕೃಷಿ ಇಲಾಖೆಯಿಂದ ವಿವಿಧ ರೀತಿಯ ಕೃಷಿ ಪರಿಕರಗಳನ್ನು ನೀಡಲಾಗಿದೆ. ಅದೇ ರೀತಿ ಸ್ತ್ರೀ ಶಕ್ತಿ ಸ್ವ– ಸಹಾಯ ಸಂಘಗಳಿಗೆ ಸಹಾಯಧನ ನೀಡುವ ಮೂಲಕ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಇಂದು 63 ಸಂಘಗಳಿಗೆ ಪ್ರತಿ ಸಂಘಕ್ಕೆ ₹ 50,000ದಂತೆ ಒಟ್ಟು ₹ 31.50 ಲಕ್ಷ ಸಹಾಯಧನವನ್ನು ನೀಡಲಾಗಿದೆ. ಈ ಸಹಾಯಧನವನ್ನು ಸಂಘಗಳ ಮಹಿಳೆಯರು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು’ ಎಂದು ಹೇಳಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್, ಹೊನ್ನಾಳಿ ಕೃಷಿ ಉಪ ನಿರ್ದೇಶಕ ರೇವಣಸಿದ್ದನಗೌಡ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಚ್.ಎಸ್. ಅರುಣ್ ಕುಮಾರ್, ಮುಖಂಡರಾದ ಎಂ.ಜಿ. ಶಶಿಕಲಾ ಮೂರ್ತಿ, ತಿಪ್ಪೇಸ್ವಾಮಿ, ಎ.ಜಿ. ಜಗದೀಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.