ದಾವಣಗೆರೆ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯದಿಂದಾಗಿ ಸಮರ್ಪಕವಾಗಿ ಆಕ್ಸಿಜನ್, ಲಸಿಕೆ ಮತ್ತು ರೆಮಿಡಿಸಿವಿರ್ ಚುಚ್ಚುಮದ್ದು ಸಿಗದೇ ಇರುವುದರಿಂದ ಕೊರೋನಾ ರೋಗಿಗಳು ಹೆಚ್ಚಾಗುವುದರ ಜೊತೆಗೆ ಸಾವಿನ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ದೂರಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಶಾಸಕರು, ಮಾಜಿ ಸಚಿವರೊಂದಿಗೆ ಆನ್ಲೈನ್ ಆನ್ಲೈನ್ ಮೂಲಕ ಸಂವಾದ ಸಭೆ ನಡೆಸಿದ ವೇಳೆ ಮಲ್ಲಿಕಾರ್ಜುನ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯ ಧೋರಣೆಯನ್ನು ಸವಿವರವಾಗಿ ವಿವರಿಸಿದರು.

ಕೊರೋನಾ 2ನೇ ಅಲೆ ಆರಂಭದಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದರಿಂದ ಸಮಸ್ಯೆ ಉಂಟಾಗಿದ್ದು, ಈಗಾಲಾದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮರ್ಪಕವಾಗಿ ಲಸಿಕೆ, ಆಮ್ಲಜನಕ ಮತ್ತು ರೆಮಿಡಿಸಿವಿರ್ ಚುಚ್ಚುಮದ್ದು ನೀಡಲು ಕೇಂದ್ರ ಮಟ್ಟದಲ್ಲಿ ಒತ್ತಡ ಹಾಕಬೇಕೆಂದು ಮನವಿ ಮಾಡಿದರು.

ದಾವಣಗೆರೆ ಜಿಲ್ಲೆಯ ಕೇಂದ್ರ ಸ್ಥಾನದಲ್ಲಿ ಸರ್ಕಾರದಿಂದ ಜಿಲ್ಲಾಸ್ಪತ್ರೆ ಮತ್ತು ಬಾಪೂಜಿ ವಿದ್ಯಾಸಂಸ್ಥೆಯಡಿ 2 ಆಸ್ಪತ್ರೆಗಳಿದ್ದು, ಸುಮಾರು 3 ಸಾವಿರ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆಗೆ ಪೂರಕವಾಗಿ ಜಿಲ್ಲಾಡಳಿತ ಸ್ಪಂದಿಸುತ್ತಿಲ್ಲ ಎಂದು ದೂರಿದರು.

ಶಾಸಕ ಶಾಮನೂರು ಶಿವಶಂಕರಪ್ಪ, ‘ಜಿಲ್ಲಾಡಳಿತ ಸಮರ್ಪಕವಾಗಿ ಆಮ್ಲಜನಕ, ಲಸಿಕೆ ಮತ್ತು ರೆಮಿಡಿಸಿವಿರ್ ಒದಗಿಸಿದರೆ ರೋಗವನ್ನು ಕಡಿಮೆಗೊಳಿಸಬಹುದು. ಲಸಿಕೆ ಮತ್ತು ರೆಮಿಡಿಸಿವಿರ್ ಉತ್ಪಾ ದನೆ ಮತ್ತು ಮಾರಾಟವನ್ನು ಮುಕ್ತ ಗೊಳಿಸಿದರೆ ಅವಶ್ಯವಿರುವವರಿಗೆ ಅನು ಕೂಲವಾಗಲಿದೆ’ ಎಂದು ಹೇಳಿದರು.

ಕೆಪಿಸಿಸಿ ವಕ್ತಾರ ಡಿ.ಬಸವರಾಜ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಪಾಲಿಕೆ ವಿರೋಧ ಪಕ್ಷದ ನಾಯಕ ಎ. ನಾಗರಾಜ್, ಸದಸ್ಯರಾದ ಕೆ. ಚಮನ್ ಸಾಬ್, ಜಿ.ಎಸ್. ಮಂಜುನಾಥ್ ಗಡಿಗುಡಾಳ್ ಅವರೂ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.