ದಾವಣಗೆರೆ: ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಪ್ರಾರಂಭಿಸಬೇಕು ಎಂದು ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹೋರಾಟ ಸಮಿತಿ ಒತ್ತಾಯಿಸಿದೆ.

ರಾಜ್ಯದ 22 ಸ್ಥಳಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ. ಚಿತ್ರದುರ್ಗ, ಬಳ್ಳಾರಿ, ಹಾವೇರಿ, ಶಿವಮೊಗ್ಗ ಸೇರಿದಂತೆ ನೆರೆಹೊರೆಯ ಜಿಲ್ಲೆಗಳಲ್ಲಿ ಈಗಾಗಲೇ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಆದರೆ, ಮಧ್ಯ ಕರ್ನಾಟಕದ ದಾವಣಗೆರೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಇಲ್ಲದಿರುವುದು ವಿಪರ್ಯಾಸ ಎಂದು ಸಮಿತಿಯ ಅಧ್ಯಕ್ಷ ಎಂ.ಟಿ. ಸುಭಾಷ್ಚಂದ್ರ ಬೇಸರ ವ್ಯಕ್ತಪಡಿಸಿದ್ದಾರೆ.

‘ದಾವಣಗೆರೆ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಅತ್ಯಗತ್ಯವಾಗಿದೆ. ಕೆಲವು ಸ್ವಹಿತಾಸಕ್ತಿಗಳು ವೈದ್ಯಕೀಯ ಕಾಲೇಜು ಆರಂಭ ಮಾಡಲು ಬಿಡುತ್ತಿಲ್ಲ’ ಎಂದು ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.

‘ನಗರದಲ್ಲಿ ಈಗಾಗಲೇ ಎರಡು ಖಾಸಗಿ ವೈದ್ಯಕೀಯ ಕಾಲೇಜುಗಳಿವೆ. ಜಿಲ್ಲಾ ಆಸ್ಪತ್ರೆಯನ್ನು ಬಳಸಿಕೊಂಡು ಖಾಸಗಿ ವೈದ್ಯಕೀಯ ಕಾಲೇಜು ಬೆಳೆಯುತ್ತಿವೆ. ಸರ್ಕಾರಿ ವೈದ್ಯಕೀಯ ಕಾಲೇಜು ಪ್ರಾರಂಭಿಸುವುದರಿಂದ ಬಡ ವಿದ್ಯಾರ್ಥಿಗಳಿಗೆ ಮತ್ತು ಬಡ ರೋಗಿಗಳಿಗೆ ಅನುಕೂಲವಾಗುತ್ತದೆ. ಈ ಬಗ್ಗೆ ಸಮಿತಿ ಹಲವು ದಿನಗಳಿಂದ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ’ ಎಂದು ಅಸಮಾಧಾನ ಹೊರಹಾಕಿದ್ದಾರೆ.

‘ನೆರೆಹೊರೆಯ ಜಿಲ್ಲೆಯ ಸಾವಿರಾರು ಜನರು ದಾವಣಗೆರೆಯ ಆಸ್ಪತ್ರೆಗಳಿಗೆ ಬರುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳು ಬಡ ಜನರನ್ನು ಲೂಟಿ ಮಾಡುತ್ತಿವೆ. ಸರ್ಕಾರಿ ವೈದ್ಯಕೀಯ ಕಾಲೇಜಿನ ನೆರವು ದೊರಕಿದರೆ ಖಾಸಗಿ ಆಸ್ಪತ್ರೆಗಳ ಹಾವಳಿ ಕಡಿಮೆಯಾಗುತ್ತದೆ. ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಸ್ಪಂದಿಸಬೇಕು’ ಎಂದು ಆಗ್ರಹಿಸಿದ್ದಾರೆ.

‘ರಾಮನಗರ ಜಿಲ್ಲೆಗೆ ಎರಡು ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ಅನುಮತಿ ನೀಡಲಾಗಿದೆ. ಮಧ್ಯ ಕರ್ನಾಟಕದ ದೊಡ್ಡ ಜಿಲ್ಲೆಯಾದ ದಾವಣಗೆರೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಹಿಂದೇಟು ಹಾಕುತ್ತಿರುವುದು ಏಕೆ’ ಎಂದು ಪ್ರಶ್ನಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.