ಜಗಳೂರು: ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಕಲ್ಪಿಸುವುದರಿಂದ ಬಡಮಕ್ಕಳ ಶಿಕ್ಷಣಕ್ಕೆಅನುಕೂಲವಾಗಲಿದ್ದು, ನೂತನವಾಗಿ ನಿರ್ಮಾಣವಾಗುತ್ತಿರುವ ಸರ್ಕಾರಿ ಶಾಲಾ ಕೊಠಡಿಗಳ ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡಬೇಕು ಎಂದು ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನ್ ಅಧಿಕಾರಿಗಳಿಗೆ ಸೂಚಿಸಿದರು.

ತಾಲ್ಲೂಕಿನ ಬಿಳಿಚೋಡು ಗ್ರಾಮದ ಉರ್ದು ಸರ್ಕಾರಿ ಶಾಲೆಯ ಆವರಣದಲ್ಲಿ ಭಾನುವಾರ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ನಂತರ ಅವರು ಮಾತನಾಡಿದರು.

ಹಿಂದುಳಿದ ಜಗಳೂರು ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಆದ್ಯತೆ ನೀಡಲಾಗುವುದು. ಈ ನಿಟ್ಟಿನಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ಅನುದಾನದಡಿ ಸುಮಾರು ₹67 ಲಕ್ಷ ಅನುದಾನ ಒದಗಿಸಲಾಗಿದೆ. ತಾಲ್ಲೂಕಿನ ಕಲ್ಲೇದೇವರಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಬಳಿ ಮಳೆನೀರು ಸಂಗ್ರಹವಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದು ಗಮನಕ್ಕೆ ಬಂದಿದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿ ಸರಿಪಡಿಸಲಾಗುವುದು ಎಂದರು.

ಪಾಕಿಸ್ತಾನದ ಭಯೋತ್ಪಾದನೆ ಚಟುವಟಿಕೆ ಸಹಿಸಲು ಸಾಧ್ಯವಿಲ್ಲ.ಆಪರೇಷನ್ ಸಿಂಧೂರ ಕಾರ್ಯಾಚರಣೆಯ. ಮೂಲಕ ಪಾಕಿಸ್ತಾನದ ಉಗ್ರರ ನೆಲೆಗಳನ್ನು ದ್ವಂಸಗೊಳಿಸಿರುವುದು ಸ್ವಾಗತರ್ಹ.ದೇಶದ ಭದ್ರತೆಗಾಗಿ ಕೇಂದ್ರ ಸರ್ಕಾರದ ಜೊತೆ ಸಹಕರಿಸಲಾಗುವುದು ಎಂದು ತಿಳಿಸಿದರು.

ಶಾಸಕ ಬಿ.ದೇವೇಂದ್ರಪ್ಪ, ಜಿಲ್ಲಾ ಸಂಸದರು ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಅನುದಾನ ಒದಗಿಸುವ ಮೂಲಕ ಕ್ಷೇತ್ರದ ಅಭಿವೃದ್ದಿಗೆ ಕೈಜೋಡಿಸಿದ್ದಾರೆ.ಬಿಳಿಚೋಡು ಬಳಿ ಸೇತುವೆ ಶಿಥಿಲಾವಸ್ಥೆಯಲ್ಲಿದ್ದು.ಶೀಘ್ರದಲ್ಲಿ ರಸ್ತೆ ಸೇತುವೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು.ಶಾಲಾ ಕಟ್ಟಡ ದುರಸ್ಥಿ,ಕೊಠಡಿ ನಿರ್ಮಾಣದೊಂದಿಗೆ ಶಿಕ್ಷಣ ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸಲಾಗುವುದು ಎಂದು ಭರವಸೆ ನೀಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಂದ್ರಮ್ಮ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎನ್.ಓಮಣ್ಣ, ಪಿಡಿಓ ನಂದಿಲಿಂಗೇಶ್ವರ, ಅರಸೀಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಮಂಜುನಾಥ್, ಮುಖಂಡರಾದ ಸಣ್ಣ ಸೂರಯ್ಯ ನಿರ್ಮಲ, ಜಲೀಲ್ ಸಾಬ್, ನೂರುಲ್ಲಾ ಸಾಬ್, ಗಿರೀಶ್ ಒಡೆಯರ್,ರಂಗಸ್ವಾಮಿ,ಹರೀಶ್,
ಪಲ್ಲಾಗಟ್ಟೆ ಶೇಖರಪ್ಪ, ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.