ಮಂಗಳವಾರ, ಜನವರಿ 26, 2021
28 °C

ಗ್ರಾ.ಪಂ. ಚುನಾವಣೆ ಘರ್ಷಣೆ: ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಗಳೂರು: ತಾಲ್ಲೂಕಿನ ಮೀನಿಗರಹಳ್ಳಿ ಗ್ರಾಮದಲ್ಲಿ ಭಾನುವಾರ ರಾತ್ರಿ ಗ್ರಾಮ ಪಂಚಾಯಿತಿ ಚುನಾವಣೆ ಸಂಬಂಧ ನಡೆದ ಎರಡು ಗುಂಪುಗಳ ಘರ್ಷಣೆಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ

ಗ್ರಾಮದ ನಿವೃತ್ತ ಶಿಕ್ಷಕ ಕೃಷ್ಣಪ್ಪ (70) ಮೃತಪಟ್ಟವರು.

ಪಂಚಾಯಿತಿ ಚುನಾವಣೆಗೆ ಸಂಬಂಧ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಕೃಷ್ಣಪ್ಪ ಅವರ ಮೇಲೆ ಹಲ್ಲೆ ನಡೆದಿದ್ದು, ಸ್ಥಳದಲ್ಲೇ ಮೃತ‍ಪಟ್ಟಿದ್ದಾರೆ ಎಂದು ಸಿಪಿಐ ಡಿ. ದುರುಗಪ್ಪ ತಿಳಿಸಿದ್ದಾರೆ.

ಘರ್ಷಣೆಯಲ್ಲಿ ಗಾಯಗೊಂಡ ಕೆಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು