ಶುಕ್ರವಾರ, ಆಗಸ್ಟ್ 19, 2022
27 °C
1ನೇ ಹಂತದಲ್ಲಿ ದಾವಣಗೆರೆ, ಹೊನ್ನಾಳಿ, ಜಗಳೂರು; 2ನೇ ಹಂತದಲ್ಲಿ ಹರಿಹರ, ಚನ್ನಗಿರಿ, ನ್ಯಾಮತಿ

ಗ್ರಾ.ಪಂ ಚುನಾವಣೆ: ಗರಿಗೆದರಿದ ಚಟುವಟಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕವನ್ನು ಸೋಮವಾರ ಚುನಾವಣಾ ಆಯೋಗವು ಘೋಷಣೆ ಮಾಡಿದ್ದು, ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ರಾಜಕೀಯ ಚಟುವಟಿಕೆ ಚುರುಕುಗೊಂಡಿದೆ.

ಜಿಲ್ಲೆಯಲ್ಲಿ 191 ಗ್ರಾಮ ಪಂಚಾಯಿತಿ
ಗಳು ಇದ್ದು, ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದಲ್ಲಿ  ದಾವಣಗೆರೆ, ಹೊನ್ನಾಳಿ ಹಾಗೂ ಜಗಳೂರು ತಾಲ್ಲೂಕುಗಳಲ್ಲಿ ಚುನಾವಣೆ ನಡೆಯಲಿದ್ದು, ಎರಡನೇ ಹಂತದಲ್ಲಿ ಹರಿಹರ, ಚನ್ನಗಿರಿ ಹಾಗೂ ನ್ಯಾಮತಿ ತಾಲ್ಲೂಕುಗಳಲ್ಲಿ ಮತದಾನ ನಿಗದಿಯಾಗಿದೆ.

ಮೊದಲ ಹಂತದಲ್ಲಿ ದಾವಣಗೆರೆ ತಾಲ್ಲೂಕಿನ 38, ಹೊನ್ನಾಳಿ ತಾಲ್ಲೂಕಿನ 29 ಹಾಗೂ ಜಗಳೂರು ತಾಲ್ಲೂಕಿನ 22 ಸೇರಿ ಒಟ್ಟು 89 ಗ್ರಾಮ ಪಂಚಾಯಿತಿಗಳಲ್ಲಿ ಮತದಾನ ನಡೆಯಲಿದೆ. ಎರಡನೇ ಹಂತದಲ್ಲಿ ಹರಿಹರ ತಾಲ್ಲೂಕಿನ 24, ಚನ್ನಗಿರಿ ತಾಲ್ಲೂಕಿನ 61 ಹಾಗೂ ನ್ಯಾಮತಿ ತಾಲ್ಲೂಕಿನ 17 ಗ್ರಾಮ ಪಂಚಾಯಿತಿಗಳು ಸೇರಿ 102 ಗ್ರಾಮ ಪಂಚಾಯಿತಿಗಳಲ್ಲಿ ಮತದಾನ ನಿಗದಿಯಾಗಿದೆ.

ಚುನಾವಣೆಯು ಪಕ್ಷಾತೀತವಾಗಿ ನಡೆದರೂ ವಿವಿಧ ಪಕ್ಷಗಳ ಬೆಂಬಲ ಪಡೆಯಲು ಆಕಾಂಕ್ಷಿಗಳು ಪ್ರಯತ್ನ ನಡೆಸಿದ್ದಾರೆ. ಪ್ರಮುಖ ರಾಜಕೀಯ ಪಕ್ಷಗಳು ಈಗಾಗಲೇ ಸಿದ್ಧತೆ ಮಾಡಿವೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.