ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಕ್ಕುಪತ್ರಕ್ಕೆ ಒತ್ತಾಯ: ಚುನಾವಣೆ ಬಹಿಷ್ಕಾರ

Published 14 ಜುಲೈ 2023, 7:02 IST
Last Updated 14 ಜುಲೈ 2023, 7:02 IST
ಅಕ್ಷರ ಗಾತ್ರ

ಕಡರನಾಯ್ಕನಹಳ್ಳಿ: ಜಮೀನುಗಳಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿಯಳೆಹೊಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಮಳಲಹಳ್ಳಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಚುನಾವಣೆ ಬಹಿಷ್ಕರಿಸಿದ್ದಾರೆ. ಇದುವರೆಗೂ ಯಾರೊಬ್ಬರೂ ನಾಮಪತ್ರ ಸಲ್ಲಿಸಿಲ್ಲ.

ಕಳೆದ ಬಾರಿಯೂ ಚುನಾವಣೆಗೆ ಗ್ರಾಮಸ್ಥರು ನಾಮಪತ್ರ ಸಲ್ಲಿಸಿರಲಿಲ್ಲ. ನಾಮಪತ್ರ ಸಲ್ಲಿಸಲು ಬುಧವಾರ ಕಡೆಯ ದಿನವಾಗಿತ್ತು. ಕೊನೆಯ ಕ್ಷಣದವರೆಗೂ ಉಪತಹಶೀಲ್ದಾರ್ ಮನವೂಲಿಸಲು ಪ್ರಯತ್ನಿಸಿದರೂ ಫಲಪ್ರದವಾಗಿಲ್ಲ.

ಮನೆಗಳಿಗೆ ಹಕ್ಕುಪತ್ರ ನೀಡಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. ಈ ಹಿಂದೆ ರೈತರೊಬ್ಬರ 12 ಎಕರೆ ಜಮೀನಿನಲ್ಲಿ 1 ಎಕರೆ ಪಡೆದು ಗ್ರಾಮಸ್ಥರಿಗೆ ಜಮೀನು ನೀಡಲಾಗಿತ್ತು. ಇಲ್ಲಿ ಗ್ರಾಮಸ್ಥರು ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ.

ಉಳಿದ ಜಮೀನಿಗೆ ಹದ್ದುಬಸ್ತ್‌ ಮಾಡಲು ಜಮೀನಿನ ಮಾಲೀಕರು ಮುಂದಾಗಿದ್ದು, ಹೀಗಾದರೆ ಗ್ರಾಮದ 17 ಮನೆಗಳನ್ನು ನೆಲಸಮ ಮಾಡಬೇಕು ಎಂಬ ಮಾತಿದೆ. ಇದರಿಂದ ಆತಂಕಕ್ಕೆ ಒಳಗಾಗಿರುವ ಗ್ರಾಮಸ್ಥರು ಹಕ್ಕುಪತ್ರ ನೀಡುವವರೆಗೂ ಚುನಾವಣೆ ಬಹಿಷ್ಕರಿಸುವುದಾಗಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT