ಹರಿಹರ: ತಾಲ್ಲೂಕಿನ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ 8ನೇ ವರ್ಷದ ವಾಲ್ಮೀಕಿ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಸಡಗರ, ಸಂಭ್ರಮದಿAದ ಜರುಗಿದ ಭವ್ಯ ರಥೋತ್ಸವದಲ್ಲಿ ಸಾವಿರಾರು ಭಕ್ತರು ಭಾಗವಹಿಸಿದ್ದರು.
ಪೀಠಾಧಿಪತಿ ಪ್ರಸನ್ನಾನಂದ ಶ್ರೀರವರು ಸೇರಿದಂತೆ ನಾಡಿನ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ನಡೆದ ಈ ರಥೋತ್ಸವದಲ್ಲಿ ಭಕ್ತರ 'ಜೈ ವಾಲ್ಮೀಕಿ' ಎಂಬ ಘೋಷಣೆಗಳು ಮುಗಿಲು ಮುಟ್ಟಿದ್ದವು.
ಬೆಳಿಗ್ಗೆ ವಿವಿಧ ವಾದ್ಯಮೇಳಗಳು ಹಾಗೂ ಬಾಜಾ ಭಜಂತಿಗಳ ಸಡಗರದ ನಡುವೆ ಸಾವಿರಾರು ಭಕ್ತರು ಜಯಘೋಷಗಳನ್ನು ಕೂಗುತ್ತಾ 63 ಅಡಿ ಎತ್ತರದ ರಿಮೋಟ್ ನಿಯಂತ್ರಿತ ರಥವನ್ನು ಎಳೆದರು. ಲಿಂ.ಪುಣ್ಯಾನAದಪುರಿ ಶ್ರೀ ಮಹಾಮಂಟಪದ ದ್ವಾರದಿಂದ ಹೊರಟ ರಥದ ಮೇಲೆ ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ಮಾಡಿದ್ದು ಜನ,ಮನ ಸೆಳೆಯಿತು.
ಮರಗಾಲು ಕುಣಿತ ಹಾಗೂ ಜಗ್ಗಲಿಗೆ ಸೇರಿದಂತೆ ವಿವಿಧ ಕಲಾತಂಡಗಳ ಪ್ರದರ್ಶನವು ರಥೋತ್ಸವಕ್ಕೆ ವಿಶೇಷ ಮೆರುಗು ನೀಡಿತು. ಈ ಸಂದರ್ಭದಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಹರಿಹರ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಹಾಗೂ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನAದಪುರಿ ಸ್ವಾಮೀಜಿ ಸೇರಿದಂತೆ ನಾಡಿನ ವಿವಿಧ ಮಠಾಧೀಶರು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಸಂಸದ ಜಿ.ಕುಮಾರ ನಾಯಕ, ಶಾಸಕರಾದ ಬಿ.ಪಿ.ಹರೀಶ್, ಕೆ.ಎಸ್.ಬಸವಂತಪ್ಪ, ಕೃಷ್ಣನಾಯಕ, ಅರವಿಂದ ಬೆಲ್ಲದ, ನಿಗಮ ಮಂಡಳಿಗಳ ಅಧ್ಯಕ್ಷರಾದ ಜಯದೇವ ನಾಯಕ ಹಾಗೂ ಎಚ್.ಬಿ.ಮಂಜಪ್ಪ ಸೇರಿದಂತೆ ಮಾಜಿ ಸಂಸದ ಪ್ರತಾಪ ಸಿಂಹ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.