ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅನುದಾನ: ಶಾಸಕ ಎಸ್‌.ವಿ. ರಾಮಚಂದ್ರ

ಪ್ರಗತಿ ಪರಿಶೀಲನೆ ಸಭೆಯಲ್ಲಿ ಶಾಸಕ ಎಸ್‌.ವಿ. ರಾಮಚಂದ್ರ
Last Updated 29 ಮೇ 2021, 4:25 IST
ಅಕ್ಷರ ಗಾತ್ರ

ಅರಸೀಕೆರೆ (ಉಚ್ಚಂಗಿದುರ್ಗ): ‘ಶಾಸಕರ ಅನುದಾನದಲ್ಲಿ ಅರಸೀಕೆರೆ ಬ್ಲಾಕ್‌ಗೆ ₹1.35 ಲಕ್ಷ ಬಿಡುಗಡೆ ಮಾಡಲಾಗಿದ್ದು, ಆಸ್ಪತ್ರೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಅಳವಡಿಸಿಕೊಂಡು ಗ್ರಾಮದಿಂದಲೇ ಸೋಂಕು ತೊಲಗಿಸುವಂತೆ ಅಧಿಕಾರಿಗಳು ಕೈ ಜೋಡಿಸಬೇಕು’ ಎಂದು ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಎಸ್.ವಿ. ರಾಮಚಂದ್ರ ಮನವಿ ಮಾಡಿದರು.

ಅರಸೀಕೆರೆ ಗ್ರಾಮದ ಕೋಲಶಾಂತೇಶ್ವರ ಮಠದಲ್ಲಿ ಶುಕ್ರವಾರ ನಡೆದ ಕೋವಿಡ್ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.

ಅರಸೀಕೆರೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ₹ 48 ಲಕ್ಷ ನೀಡಲಾಗಿದೆ. ಮಾದಿಹಳ್ಳಿ, ಉಚ್ಚಂಗಿದುರ್ಗ ಸೇರಿ
ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ₹ 90 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ. ಗುಣಮಟ್ಟದ ಚಿಕಿತ್ಸೆ
ನೀಡಬೇಕು ಎಂದು ವೈದ್ಯರಲ್ಲಿ ಮನವಿ ಮಾಡಿದರು.

ಸಂಸದ ಜಿ.ಎಂ. ಸಿದ್ದೇಶ್ವರ, ‘ಯುವ ಪೀಳಿಗೆಯೇ ಕೋವಿಡ್‌ಗೆ ಬಲಿಯಾಗುತ್ತಿದ್ದಾರೆ. ಅಧಿಕಾರಿಗಳು ಪ್ರತಿ ಗ್ರಾಮಗಳಿಗೆ ತೆರಳಿ ಸಾರ್ವಜನಿಕರು ಮನೆಯಲ್ಲಿ ಉಳಿಯುವಂತೆ ಮನವೊಲಿಸಬೇಕು.ಕೋವಿಡ್ ಭಯ ಬೇಡ. ಇದರಿಂದಲೇ ಗ್ರಾಮೀಣ ಪ್ರದೇಶದಲ್ಲಿ ಅಧಿಕ ಪ್ರಮಾಣದಲ್ಲಿ ಸಾವು ಸಂಭವಿಸಿದೆ. ಸಾರ್ವಜನಿಕರು ಎಚ್ಚೆತ್ತು ತಪಾಸಣೆಗೆ ಒಳಗಾಗಬೇಕು’ ಎಂದರು.

ಜಗಳೂರಿನಲ್ಲಿ ಆಮ್ಲಜನಕ ಘಟಕ ಸ್ಥಾಪನೆಗೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಅವಳಿ ಜಿಲ್ಲೆಗಳ ಜಿಲ್ಲಾಧಿಕಾರಿ ಜೊತೆ ಚರ್ಚಿಸಿ ಅರಸೀಕೆರೆ ಬ್ಲಾಕ್‌ಗೆ ಆಮ್ಲಜನಕ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ ಹೋಮ್ ಕ್ವಾರಂಟೈನ್ ಆಗಿರುವ ಕೋವಿಡ್ ಸೋಂಕಿತರನ್ನು ತುರ್ತಾಗಿ ಕೋವಿಡ್ ಕೇಂದ್ರಕ್ಕೆ ಸ್ಥಳಾಂತರ ಮಾಡಬೇಕು ಎಂದು ಹೇಳಿದರು.

‘ಕೃಷಿ ಚಟುವಟಿಕೆಗೆ ವಿನಾಯಿತಿ ಇದೆ. ಬಳ್ಳಾರಿ ಜಿಲ್ಲಾ ಕೇಂದ್ರದಿಂದ ಬಿತ್ತನೆ ಬೀಜ, ಗೊಬ್ಬರ ಸರಬರಾಜು ಮಾಡಲು ತೊಂದರೆ ಆಗುವುದರಿಂದ ದಾವಣಗೆರೆ ಜಿಲ್ಲಾ ಕೇಂದ್ರದ ಮೂಲಕವೇ ರೈತರಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು.ಈಗಾಗಲೇ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಜಿಲ್ಲೆಗೆ ಅಗತ್ಯ ರಸಗೊಬ್ಬರ ಪೂರೈಕೆ ಕುರಿತು ಕೇಂದ್ರ ರಸಗೊಬ್ಬರ ಸಚಿವ ಸದಾನಂದಗೌಡ ಅವರನ್ನು ದೂರವಾಣಿಯಲ್ಲಿ ಸಂಪರ್ಕಿಸಿ ಮನವಿ ಸಲ್ಲಿಸಿದ್ದೇನೆ’ ಎಂದು ತಿಳಿಸಿದರು. ತಾಲ್ಲೂಕು ವೈದ್ಯಾಧಿಕಾರಿ ವೆಂಕಟೇಶ್, ‘ಅರಸೀಕೆರೆ ಬ್ಲಾಕ್ ವ್ಯಾಪ್ತಿಯಲ್ಲಿ 3,500ಕ್ಕೂ ಅಧಿಕ ಜನರನ್ನು ತಪಾಸಣೆಗೆ ಒಳಪಡಿಸಲಾಗಿದೆ. 131 ಜನರಲ್ಲಿ ಸೋಂಕು ಸಕ್ರಿಯವಾಗಿದೆ. ಸೋಂಕಿನಿಂದ ಇಲ್ಲಿಯವರೆಗೆ 15 ಜನ ಮೃತಪಟ್ಟಿದ್ದಾರೆ. ಹರಪನಹಳ್ಳಿ ತಾಲ್ಲೂಕಿನ ಆರು ಕಡೆಗಳಲ್ಲಿ ಕೋವಿಡ್ ಕೇಂದ್ರ ತೆರೆಯಲಾಗಿದೆ. ಅರಸೀಕೆರೆ ಬ್ಲಾಕ್ ವ್ಯಾಪ್ತಿಯಕಮ್ಮತಹಳ್ಳಿಯಲ್ಲಿ ಕೋವಿಡ್ ಕೇಂದ್ರ ತೆರೆಯಲು ಕ್ರಮ ಕೈಗೊಳ್ಳಲಾಗಿತ್ತು. ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿದ್ದು, ಅವರ ಮನವೊಲಿಸಿ ಕೇಂದ್ರ ತೆರೆಯಲಾಗುವುದು’ ಎಂದರು.

ತಹಶೀಲ್ದಾರ್ ಎಲ್.ಎಂ. ನಂದೀಶ್, ಉಪ ತಹಶೀಲ್ದಾರ್ ಫಾತಿಮಾ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಕ್ಕಮ್ಮ ಲಕ್ಷ್ಮಣ, ಸಿಪಿಐ ನಾಗರಾಜ್ ಕಮ್ಮಾರ, ಮುಖಂಡರಾದ ವೈ.ಡಿ. ಅಣ್ಣಪ್ಪ, ಬಾಲೆನಹಳ್ಳಿ ಕೆಂಚನಗೌಡ, ಫಣಿಯಾಪುರ ಲಿಂಗರಾಜ, ರಾಜಾನಾಯ್ಕ, ಮಂಜುನಾಥಯ್ಯ, ಆನಂದಪ್ಪ, ಗೋಪಿನಾಯ್ಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT