ದಾವಣಗೆರೆ: ಹಿಂಗಾರು ಹಂಗಾಮಿನ ಕಡಲೆಕಾಳನ್ನು ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಖರೀದಿಸಲು ಸರ್ಕಾರ ಆದೇಶಿಸಿದ್ದು, ನೋಂದಣಿ ಕಾರ್ಯ ಜ.27ರಿಂದ ಆರಂಭವಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಈಚೆಗೆ ನಡೆದ ಜಿಲ್ಲಾ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಉತ್ತಮ ಗುಣಮಟ್ಟದ ಪ್ರತಿ ಕ್ವಿಂಟಲ್ ಕಡಲೆಕಾಳಿಗೆ ₹ 5,650 ದರ ನಿಗದಿಪಡಿಸಲಾಗಿದೆ. ಜಗಳೂರು ಮತ್ತು ಚನ್ನಗಿರಿ ಎಪಿಎಂಸಿ ಆವರಣದಲ್ಲಿ ರೈತರ ನೋಂದಣಿ ಕಾರ್ಯ ನಡೆಯುತ್ತಿದೆ. ನಾಫೆಡ್ ಸಂಸ್ಥೆ ಕೇಂದ್ರದ ಖರೀದಿ ಏಜೆನ್ಸಿಯಾಗಿ ಹಾಗೂ ಕರ್ನಾಟಕ ಸಹಕಾರ ಮಾರಾಟ ಮಹಾಮಂಡಳಿ ರಾಜ್ಯದ ಖರೀದಿ ಏಜೆನ್ಸಿಯಾಗಿದೆ’ ಎಂದು ಹೇಳಿದರು.

‘ನೋಂದಣಿ ಕಾರ್ಯ 80 ದಿನ ನಡೆಯಲಿದೆ. ಖರೀದಿಗೂ 90 ದಿನಗಳ ಕಾಲಾವಕಾಶ ಸಿಗಲಿದೆ. ಪ್ರತಿ ಎಕರೆಗೆ 4 ಕ್ವಿಂಟಲ್ನಂತೆ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಲ್ ಕಡಲೆಕಾಳು ಖರೀದಿಗೆ ಮಿತಿ ನಿಗದಿಪಡಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.