ನ್ಯಾಮತಿ: ರಾಜ್ಯದ ಜನರ ಹಿತದೃಷ್ಟಿಯಿಂದ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, 7 ಕೋಟಿ ಜನರು ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ ಎಂದು ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಜಿ. ಶಿವರಾಮನಾಯ್ಕ ಹೇಳಿದರು.

ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ನಡೆದ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಿಂಗಳಿಗೆ ಎರಡು ಬಾರಿ ಸಭೆ ನಡೆಸಿ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಯುವನಿಧಿ, ಗೃಹಜ್ಯೋತಿ ಮತ್ತು ಶಕ್ತಿ ಯೋಜನೆಗಳ ಅನುಷ್ಠಾನ ಬಗ್ಗೆ ಗಮನಹರಿಸಬೇಕಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಣಾಧಿಕಾರಿ ಎಚ್.ವಿ.ರಾಘವೇಂದ್ರ ಹೇಳಿದರು.

ತಾಲ್ಲೂಕಿನ ಕೆಲವು ಗ್ರಾಮಗಳಿಗೆ ಸರ್ಕಾರಿ ಬಸ್ ಸಂಚಾರ ಇಲ್ಲ. ಕುದುರೆಕೊಂಡ, ಯರಗನಾಳ್, ಸಾಲಬಾಲು ಗ್ರಾಮಗಳಿಗೆ ಬೆಳಿಗ್ಗೆ ಮತ್ತು ಸಂಜೆ ವೇಳೆ ಬಸ್ ವ್ಯವಸ್ಥೆ ಮಾಡುವ ಬಗ್ಗೆ ಚರ್ಚೆ ನಡೆಯಿತು. ಕೆಲವು ಕಡೆಗಳಲ್ಲಿ ಪಡಿತರ ಪಡೆಯಲು ಜನರು ಅಕ್ಕಪಕ್ಕದ ಗ್ರಾಮದಿಂದ ಬರಬೇಕಿದೆ. ಆಯಾ ಗ್ರಾಮಗಳಿಗೆ ಪಡಿತರ ಸರಬರಾಜು ಮಾಡುವ ಬಗ್ಗೆ ಕ್ರಮ ಕೈಗೊಳ್ಳುವ ಬಗ್ಗೆ ಸದಸ್ಯರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಯುವನಿಧಿ ಯೋಜನೆ ಬಗ್ಗೆ ಅರಿವು ಮೂಡಿಸಲು ಪದವಿ ಕಾಲೇಜಿನಲ್ಲಿ ಕಾರ್ಯಕ್ರಮ ಆಯೋಜಿಸುವಂತೆ ಉದ್ಯೋಗ ವಿನಿಮಯ ಅಧಿಕಾರಿಗೆ ಸದಸ್ಯರು ಸೂಚಿಸಿದರು.

ಗ್ಯಾರಂಟಿ ಅನುಷ್ಠಾನ ಸಮಿತಿ ಕಚೇರಿ ತೆರೆಯಲು ಸೂಕ್ತ ಸ್ಥಳ ಸಿಗದ ಕಾರಣ ತಾತ್ಕಲಿಕವಾಗಿ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿಯೇ ವ್ಯವಸ್ಥೆ ಮಾಡಲಾಗುವುದು ಎಂದು ಅಧ್ಯಕ್ಷರು ತಿಳಿಸಿದರು.

ಮುಸ್ಸೇನಾಳು ಗ್ರಾಮದಲ್ಲಿ ಎಸ್ಸಿ ಜನಗಣತಿ ಕಾರ್ಯಕ್ಕೆ ಅಂಗನವಾಡಿ ಕಾರ್ಯಕರ್ತೆಯರು ಸಹಕರಿಸುತ್ತಿಲ್ಲ ಎಂದು ಅವರು ಇದೇ ವೇಳೆ ದೂರಿದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿ ಅತ್ರೇಯಾ ಪುರಾಣಿಕ್, ಬೆಸ್ಕಾಂ ಎಂಜಿನಿಯರ್ ಯೋಗೇಶ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜ್ಯೋತಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಪ್ರಿಯಾಂಕ, ಸಾರಿಗೆ ನಿಗಮದ ಅಧಿಕಾರಿ ತಮ್ಮ ಇಲಾಖೆಗಳ ಬಗ್ಗೆ ಮಾಹಿತಿ ನೀಡಿ, ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿದರು.

ಇದೇ ಸಂದರ್ಭದಲ್ಲಿ ಸಮಿತಿ ಸದಸ್ಯರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಗ್ಯಾರಂಟಿ ಸಮಿತಿಯ ಆಶಾ, ಕೆ.ಆರ್.ವಸಂತನಾಯ್ಕ, ಮಲ್ಲೇಶಪ್ಪ, ಷೇಕ್ ಅಬು ಸ್ವಾಲೇಹಾ, ಎಸ್.ಬಿ.ಜಯಪ್ಪ, ಕೆ. ಚೇತನ, ಎಸ್.ಕೆ.ತೀರ್ಥಲಿಂಗಪ್ಪ, ಎ.ಜಿ.ಶಿವನಗೌಡ, ಎಚ್.ಮಲ್ಲಿಕಾರ್ಜುನ, ಎಸ್.ಆರ್.ರಮೇಶ, ತಾಲ್ಲೂಕು ಪಂಚಾಯಿತಿ ನರೇಗಾ ಸಹಾಯಕ ನಿರ್ದೇಶಕ ಎಂ.ಎಸ್.ಸಂಗಮೇಶ, ತಾಲ್ಲೂಕು ಯೋಜನಾಧಿಕಾರಿ ಸಂತೋಷಕುಮಾರ, ಡಿಇಒ ಎನ್.ಅನುಷಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.