ದಾವಣಗೆರೆ: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಪಂಚ ಗ್ಯಾರಂಟಿಗಳು ಅರ್ಹ ಫಲಾನುಭವಿಗಳನ್ನು ತಲುಪಲಿ. ತಂತ್ರಾಂಶ ನೋಂದಣಿ ಸೇರಿದಂತೆ ಯಾವುದೇ ಕಾರಣದಿಂದ ಫಲಾನುಭವಿಗಳು ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಟಿ. ಬಸವರಾಜ ಸೂಚಿಸಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಗ್ಯಾರಂಟಿ ಯೋಜನೆಗಳು ಜೀವನಮಟ್ಟ ಸುಧಾರಿಸುತ್ತಿವೆ. ಬೇರೆ ರಾಜ್ಯಗಳಲ್ಲಿ ಪ್ರಶಂಸೆಗೆ ಪಾತ್ರವಾಗಿವೆ. ‘ಯುವನಿಧಿ’ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕಾಲೇಜು, ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚಿನ ಮಾಹಿತಿ ನೀಡಲು ಶಿಬಿರಗಳನ್ನು ಆಯೋಜಿಸಿ ಎಂದು ಸೂಚಿಸಿದರು.

ಗೃಹಲಕ್ಷ್ಮೀ ಯೋಜನೆಯಡಿ ಈವರೆಗೆ ₹ 1,545 ಕೋಟಿ ಪಾವತಿ ಮಾಡಲಾಗಿದೆ. ಶಕ್ತಿ ಯೋಜನೆಯಡಿ ಈವರೆಗೆ ಜಿಲ್ಲೆಯಲ್ಲಿ 11.32 ಕೋಟಿ ಟ್ರಿಪ್ ಮಹಿಳೆಯರು ಪ್ರಯಾಣಿಸಿದ್ದು, ₹ 331.56 ಕೋಟಿ ಪ್ರಯಾಣ ವೆಚ್ಚ ಪಾವತಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ ₹ 346.33 ಕೋಟಿ ವೆಚ್ಚ ಮಾಡಲಾಗಿದೆ. ಗೃಹ ಜ್ಯೋತಿ ಯೋಜನೆಯಡಿ ಪ್ರತಿ ತಿಂಗಳು ₹ 24.22 ಕೋಟಿ ಪಾವತಿಸಲಾಗುತ್ತಿದೆ. ಯುವನಿಧಿ ಯೋಜನೆಯಡಿ ₹ 24.69 ಕೋಟಿ ನಿರುದ್ಯೋಗಿ ಭತ್ಯೆ ನೀಡಲಾಗಿದೆ ಎಂದು ಸಭೆಯ ಗಮನಕ್ಕೆ ತರಲಾಯಿತು.

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಮಮತ ಹೊಸಗೌಡ್ರು, ಯೋಜನಾ ನಿರ್ದೇಶಕ ಮಲ್ಲನಾಯ್ಕ, ಜಿಲ್ಲಾ ಗ್ಯಾರಂಟಿ ಸಮಿತಿ ಉಪಾಧ್ಯಕ್ಷರಾದ ರಾಜೇಶ್ವರಿ, ಕೆ.ಎನ್. ಮಂಜುನಾಥ್, ನಂಜಾನಾಯ್ಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.