ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾರರ ಪಟ್ಟಿಯಲ್ಲಿ ಹೆಸರು ಕೈಬಿಟ್ಟಿರುವ ಬಗ್ಗೆ ಅತಿಥಿ ಉಪನ್ಯಾಸಕರ ಆಕ್ರೋಶ

Published 20 ಮೇ 2024, 15:15 IST
Last Updated 20 ಮೇ 2024, 15:15 IST
ಅಕ್ಷರ ಗಾತ್ರ

ಜಗಳೂರು: ಆಗ್ನೇಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಕೈಬಿಟ್ಟು ಹೋಗಿರುವ ಅತಿಥಿ ಉಪನ್ಯಾಸಕರು ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. 

ತಾಲ್ಲೂಕು ಚುನಾವಣಾ ಶಾಖೆಗೆ ಹೊಸ ಮತದಾರರ ಸೇರ್ಪಡೆಗೆ ಸಂಬಂಧಿಸಿದಂತೆ ಎಲ್ಲ ಅಗತ್ಯ ದಾಖಲೆಗಳನ್ನು ಸಕಾಲದಲ್ಲಿ ಸಲ್ಲಿಸಿದ್ದರೂ, ಪರಿಗಣಿಸಿಲ್ಲ. ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವುದು ಮತದಾನ ಹಕ್ಕಿನ ಉಲ್ಲಂಘನೆಯಾಗಿದೆ’ ಎಂದು ಪ್ರತಿಭಟನಾಕಾರರು ಆರೋಪಿಸಿದರು.

‘ಚುನಾವಣಾ ಆಯೋಗದ ನಿರ್ದೇಶನದಂತೆ ಅನುದಾನಿತ, ಅನುದಾನರಹಿತ, ಸರ್ಕಾರಿ ಪ್ರೌಢಶಾಲೆ ಹಾಗೂ ಕಾಲೇಜುಗಳಲ್ಲಿ ಸೇವೆ ಸಲ್ಲಿಸುವ ಉಪನ್ಯಾಸಕರನ್ನು ಮತದಾನ ಪಟ್ಟಿಯಲ್ಲಿ ಸೇರಿಸಲಾಗುತ್ತದೆ. ಆದರೆ, ನೂತನ ಮತದಾರರ ಸೇರ್ಪಡೆಗೆ ಪಟ್ಟಣದ ಹೋ.ಚಿ. ಬೋರಯ್ಯ ಪ್ರಥಮ ದರ್ಜೆ ಕಾಲೇಜು ಹಾಗೂ ವಿವಿಧ ಸಂಯುಕ್ತ ಕಾಲೇಜುಗಳು ಮತ್ತು ಪ್ರೌಢಶಾಲೆಗಳ ಉಪನ್ಯಾಸಕರು, ಶಿಕ್ಷಕರು ದಾಖಲೆ ಸಮೇತ ಅರ್ಜಿ ಸಲ್ಲಿಸಿದ್ದರೂ, ಚುನಾವಣೆ ಶಾಖೆಯ ನಿರ್ಲಕ್ಷ್ಯದಿಂದ ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. ಹೊಸ ಮತದಾರರ ಸೇರ್ಪಡೆ ದಿನಾಂಕದ ಗಡುವು ಮುಗಿದಿದೆ’ ಎಂದು ಆತಂಕ ವ್ಯಕ್ತಪಡಿಸಿದರು. 

‘ಆಗ್ನೇಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಒಟ್ಟು 23,514 ಮತದಾರರಿದ್ದಾರೆ. ಜಗಳೂರು ತಾಲ್ಲೂಕಿನಲ್ಲಿ 350 ಮತದಾರರಿದ್ದು, ಪ್ರಸಕ್ತ ಸಾಲಿನಲ್ಲಿ 60 ಜನ ಮಾತ್ರ ಹೊಸದಾಗಿ ಸೇರ್ಪಡೆಗೊಂಡಿದ್ದಾರೆ. ಅರ್ಹ ಮತದಾರರು ಮತದಾನದಿಂದ ವಂಚಿತರಾಗುತ್ತಿರುವುದು ಬೇಸರ ತಂದಿದೆ’ ಎಂದು ಅತಿಥಿ ಉಪನ್ಯಾಸಕರ ಒಕ್ಕೂಟದ ಮಾದಿಹಳ್ಳಿ ಮಂಜುನಾಥ್ ಆರೋಪಿಸಿದರು. 

ಉಪನ್ಯಾಸಕರಾದ ಅಶೋಕ ಕುಮಾರ್, ಮಂಜುನಾಥ್, ರಮೇಶ್, ಶಶಿಕುಮಾರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT