ಸೋಮವಾರ, ಜೂನ್ 14, 2021
20 °C

ಗುಡುಗು ಸಹಿತ ಆಲಿಕಲ್ಲು ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಚ್ಚಂಗಿದುರ್ಗ: ಅರಸೀಕೆರೆ ಹೋಬಳಿ ವ್ಯಾಪ್ತಿಯಲ್ಲಿ ಸೋಮವಾರ ಗುಡುಗು, ಸಿಡಿಲ ಆರ್ಭಟದೊಂದಿಗೆ ಆಲಿಕಲ್ಲು ಸಹಿತ ಉತ್ತಮ ಮಳೆಯಾಗಿದೆ.

ಪುಣಭಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಗ್ಗಿನ ಬಸಾಪುರ ಗ್ರಾಮದ ಹೊನ್ನಕ್ಕ ಅವರಿಗೆ ಸೇರಿದ ಹಸು ಸಿಡಿಲಿಗೆ ಬಲಿಯಾಗಿದೆ.

ಪಕ್ಕದಲ್ಲಿದ್ದ ಕರು ಗಾಯಾಗೊಂಡಿದೆ. ಗ್ರಾಮದ ಗೌಡ್ರ ಬಸವರಾಜಪ್ಪ ಅವರ ತೆಂಗಿನ ಮರಕ್ಕೆ ಸಿಡಿಲು ಬಡಿದಿದೆ. ಪುಣಭಘಟ್ಟದಲ್ಲಿ ಪ್ರಭು ಅವರಿಗೆ ಸೇರಿದ ಎಮ್ಮೆ ಸಿಡಿಲು ಬಡಿದು ಮೃತಪಟ್ಟಿದೆ.

ಅರಸೀಕೆರೆ, ಅಣಜಿಗೆರೆ, ಉಚ್ಚಂಗಿದುರ್ಗ ವ್ಯಾಪ್ತಿಯಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ರಭಸದ ಮಳೆ ಸುರಿಯಿತು. ಹಿರೇಮೆಗಳಗೆರೆ, ಲಕ್ಷ್ಮೀಪುರ, ಚಟ್ನಿಹಳ್ಳಿ, ಕಂಚಿಕೆರೆ ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.