ಗುರುವಾರ , ಆಗಸ್ಟ್ 5, 2021
24 °C

ಫೇಸ್‌ಬುಕ್‌ನಲ್ಲಿ ಹಾಲಸ್ವಾಮೀಜಿ ಅವಹೇಳನ: ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಬುಧವಾರ ಲಿಂಗೈಕ್ಯರಾದ ಹೊನ್ನಾಳಿ ತಾಲ್ಲೂಕಿನ ರಾಂಪುರದ ಹಾಲಸ್ವಾಮೀಜಿ ಅವರ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನ ಮಾಡಿದ ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರಾಷ್ಟ್ರೀಯ ಬಸವ ಸೇನೆ ಪದಾಧಿಕಾರಿಗಳು ಇಲ್ಲಿನ ಸೈಬರ್ ಅಪರಾಧ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

‘ವಿಶ್ವಾರಾಧ್ಯ ಸತ್ಯಂಪೇಟೆ ಎಂಬುವವರು ಫೇಸ್‌ಬುಕ್‌ನಲ್ಲಿ ಶ್ರೀಗಳ ಭಾವಚಿತ್ರದ ಜೊತೆಗೆ ವಚನಗಳನ್ನು ಬಳಸಿಕೊಂಡು ಬಸವಣ್ಣ ಮತ್ತು ಲಿಂಗೈಕ್ಯ ಶ್ರೀಗಳನ್ನು ಅವಮಾನಿಸಿದ್ದಾರೆ. ಈ ಮೂಲಕ ಸಮಾಜದಲ್ಲಿ ಅಶಾಂತಿ ಉಂಟು ಮಾಡಲು ಪ್ರಯತ್ನಿಸಿದ್ದಾರೆ. ಅವರ ವಿರುದ್ಧ ಸೈಬರ್ ಕ್ರೈಂ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು’ ಸೇನೆ ರಾಜ್ಯಾಧ್ಯಕ್ಷ ಶಿವನಗೌಡ ಪಾಟೀಲ್ ದೂರಿನಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.