ಶ್ರೀಹಾಲುಮತ ಸೌಹಾರ್ದ ಪತ್ತಿನ ಸಹಕಾರ ಸಂಘದ ಉದ್ಘಾಟನೆ 12ಕ್ಕೆ

7

ಶ್ರೀಹಾಲುಮತ ಸೌಹಾರ್ದ ಪತ್ತಿನ ಸಹಕಾರ ಸಂಘದ ಉದ್ಘಾಟನೆ 12ಕ್ಕೆ

Published:
Updated:

ದಾವಣಗೆರೆ: ಶ್ರೀ ಹಾಲುಮತ ಪತ್ತಿನ ಸಹಕಾರ ಸಂಘದ ಉದ್ಘಾಟನಾ ಸಮಾರಂಭವನ್ನು ಇದೇ 12ರಂದು ಬೆಳಿಗ್ಗೆ 11 ಗಂಟೆಗೆ ನಗರದ ರೇಣುಕ ಮಂದಿರದಲ್ಲಿ ಏರ್ಪಡಿಸಿರುವ ಸಮಾರಂಭದಲ್ಲಿ ಉದ್ಘಾಟಿಸಲಾಗುವುದು ಎಂದು ಹಾಲುಮತ ಮಹಾಸಭಾದ ರಾಜ್ಯ ಸಂಚಾಲಕ ವೆಂಕಟೇಶ್‌ ಎಸ್. ಮಾಯಕೊಂಡ ಹೇಳಿದರು.

ಕಾಗಿನೆಲೆ ಕನಕಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ, ಶಾಸಕ ಕೆ.ಎಸ್. ಈಶ್ವರಪ್ಪ, ಅರಣ್ಯ ಸಚಿವ ಆರ್. ಶಂಕರ್, ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಶಾಮನೂರು ಶಿವಶಂಕರಪ್ಪ ಭಾಗವಹಿಸಲಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನಿರಂಜನಾನಂದಪುರಿ ಸ್ವಾಮೀಜಿ ಆಶಯದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸಹಕಾರ ಸಂಘ ಸ್ಥಾಪಿಸಲಾಗುತ್ತಿದ್ದು, ಪ್ರಥಮವಾಗಿ ದಾವಣಗೆರೆಯಲ್ಲಿ ಸಂಘ ಉದ್ಘಾಟಿಸಲಾಗುತ್ತಿದೆ. ಹಾಗೆಯೇ ಎಲ್ಲಾ ಜಿಲ್ಲೆಗಳಲ್ಲೂ ಸಮಾಜದಿಂದ ಪಬ್ಲಿಕ್‌ ಶಾಲೆಗಳನ್ನು ತೆರೆಯಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಇದೇ ಸಮಾರಂಭದಲ್ಲಿ ಹಾಲುಮತ ಸಮಾಜದ ಜಿಲ್ಲಾ ಘಟಕದ ಕಚೇರಿಯನ್ನೂ ಉದ್ಘಾಟಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಸಮಾಜದ ಮುಖಂಡರಾದ ಸಿ. ವೀರಣ್ಣ, ಚಂದ್ರು ದೀಟೂರ್, ರಾಜು ಮೌರ್ಯ, ಷಣ್ಮುಖಪ್ಪ, ಪರಮೇಶ್ವರ್‌, ಪರಶುರಾಮ್, ಹನುಮಂತಪ್ಪ, ಮಹಾಂತೇಶ್, ಸಿದ್ದಲಿಂಗಪ್ಪ, ಬಸವರಾಜ್, ಅವರೂ ಇದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !