ಹರಿಹರ: ‘ದುಶ್ಚಟಗಳಿಂದ ದೂರ ಉಳಿದರೆ ನಾನೂ ಮತ್ತು ನಮ್ಮ ಕುಟುಂಬ ನೆಮ್ಮದಿಯ ಜೀವನ ಸಾಗಿಸಲು ಸಾಧ್ಯ’ ಎಂದು ಜನ ಜಾಗೃತಿ ವೇದಿಕೆಯ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಎಚ್.ಪಿ.ಬಾಬಣ್ಣ ಹೇಳಿದರು.

ನಗರದ ಕೆ.ಆರ್.ಬಡಾವಣೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಇಂದಿನ ಯುವ ಪೀಳಿಗೆ ವಿವಿಧ ದುಶ್ಚಟಗಳಿಗೆ ಒಳಗಾಗಿ ತಮ್ಮ ಉಜ್ವಲ ಭವಿಷ್ಯವನ್ನು ನಾಶ ಮಾಡಿಕೊಳ್ಳುತ್ತಿದ್ದಾರೆ. ಯುವಕರು ಇನ್ನಾದರೂ ಜಾಗೃತರಾಗಬೇಕಿದೆ. ದೇಶದಲ್ಲಿ ಅನೇಕ ಯುವಕ– ಯುವತಿಯರು ತಂಬಾಂಕು ಸೇವನೆ ಮಾಡುತ್ತಿದ್ದಾರೆ. ಅವರ ಈ ವ್ಯಸನವನ್ನು ಪೋಷಕರು ಪತ್ತೆ ಹಚ್ಚಿ ದುಶ್ಚಟಗಳ ದಾಸ್ಯದಿಂದ ದೂರ ಮಾಡಲು ಮುಂದಾಗಬೇಕು’ ಎಂದರು.

ಸಂಪನ್ಮೂಲ ವ್ಯಕ್ತಿ ಮಂಜುಳಾ, ಮೇಲ್ವಿಚಾರಕ ಮಲ್ಲಿಕಾರ್ಜುನ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ರೂಪಾ, ಶಿವಕುಮಾರ್, ಸೇವಾ ಪ್ರತಿನಿಧಿ ಪ್ರೇಮಲೀಲಾ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-43-810093996

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.