ಹರಿಹರ: ‘ನಗರದ ಹಳೆ ಕೋರ್ಟ್ ಆವರಣದ ನಿವೇಶನದಲ್ಲಿ ಉದ್ದೇಶಿತ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸದಿದ್ದರೆ ಏ. 14ರಂದು ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು’ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕ್ರಷ್ಣಪ್ಪ ಸ್ಥಾಪಿಸಿದ) ತಾಲ್ಲೂಕು ಘಟಕದ ಸಂಚಾಲಕ ಪಿ.ಜೆ.ಮಹಾಂತೇಶ್ ಹೇಳಿದರು.

‘ಹಲವು ವರ್ಷಗಳ ಹೋರಾಟದಿಂದ ಹರಪನಹಳ್ಳಿ ರಸ್ತೆಯ ಹಳೆಕೋರ್ಟ್ ಆವರಣದಲ್ಲಿ ನಿವೇಶನ ಮಂಜೂರಾಗಿದೆ’ ಎಂದು ನಗರದ ತಾಲ್ಲೂಕು ಕಚೇರಿಯಲ್ಲಿ ಮಂಗಳವಾರ ನಡೆದ ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅವರು ತಿಳಿಸಿದರು.

‘ಆರೇಳು ತಿಂಗಳ ಹಿಂದೆಯೇ ರಾಜ್ಯ ಸರ್ಕಾರ ಇದಕ್ಕಾಗಿ ₹ 2 ಕೋಟಿ ಅನುದಾನ ಮಂಜೂರು ಮಾಡಿದೆ. ₹ 50 ಲಕ್ಷ ಬಿಡುಗಡೆಯಾಗಿದೆ. ಈವರೆಗೂ ಕಾಮಗಾರಿ ಆರಂಭವಾಗಿಲ್ಲ. ಈ ಕಾಮಗಾರಿಗೆ ಯಾರು ಅಡ್ಡಿಯಾಗಿದ್ದಾರೆ ತಿಳಿಸಿ’ ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದರು.

‘ಏ. 14ರಂದು ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಆಚರಿಸುವ ಮುನ್ನ ಈ ಭವನದ ಕಾಮಗಾರಿಗೆ ಭೂಮಿಪೂಜೆ ನಡೆಯಬೇಕು. ಇಲ್ಲದಿದ್ದರೆ ಕಾರ್ಯಕ್ರಮದಲ್ಲಿ ಭಾಗವಹಿಸದೆ ತಾಲ್ಲೂಕು ಕಚೇರಿ ಎದುರು ಅರೆಬೆತ್ತಲೆ ಪ್ರತಿಭಟನೆ ಹಾಗೂ ಸರ್ಕಾರದ ಶವಯಾತ್ರೆ ನಡೆಸಲಾಗುವುದು’ ಎಂದು ಎಚ್ಚರಿಸಿದರು.

‘ಜಯಂತಿಯಲ್ಲಿ ಭಾಗವಹಿಸುವರರಿಗೆ ‘ಸಂವಿಧಾನ ಓದು’ ಎಂಬ ಪುಸ್ತಕದ 1,000 ಪ್ರತಿ ಹಾಗೂ 1,000 ನೀಲಿ ಶಾಲುಗಳನ್ನು ಹಂಚಿಕೆ ಮಾಡಬೇಕು. ಮೆರವಣಿಗೆಯನ್ನು ಅದ್ದೂರಿಯಾಗಿ ನಡೆಯುವಂತೆ ವ್ಯವಸ್ಥೆ ಮಾಡಬೇಕು’ ಎಂದು ಆಗ್ರಹಿಸಿದರು.

‘ಭವನ ನಿರ್ಮಾಣಕ್ಕೆ ಯಾರೂ ಅಡ್ಡಿಪಡಿಸಿಲ್ಲ. ನಿಯಮಾವಳಿ ಪ್ರಕಾರ ಪ್ರಕ್ರಿಯೆಗಳನ್ನು ಮಾಡಲಾಗುತ್ತಿದೆ. ಏ. 14ರಂದು ಭೂಮಿಪೂಜೆ ಮಾಡುವ ಕುರಿತು ಶಾಸಕ ಬಿ.ಪಿ.ಹರೀಶ್ ಅವರೊಂದಿಗೆ ಚರ್ಚಿಸಲಾಗುವುದು’ ಎಂದು ತಹಶೀಲ್ದಾರ್ ಜಿ.ಸಂತೋಷ್ ಕುಮಾರ್ ಪ್ರತಿಕ್ರಿಯಿಸಿದರು.

ದಲಿತ ಮುಖಂಡ ವಾಸನದ ಸುರೇಶ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಟಿ.ಜೆ.ಮುರುಗೇಶಪ್ಪ, ಪರಿಸರ ಸಂರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಸಂಚಾಲಕ ಬಿ.ಮಗ್ದುಮ್, ನಗರಸಭೆ ಮಾಜಿ ಉಪಾಧ್ಯಕ್ಷ ಎಂ.ಎಸ್.ಬಾಬುಲಾಲ್, ದಸಂಸ ಮುಖಂಡರಾದ ಎಚ್.ಎಂ.ಗುಡ್ಡದಯ್ಯ, ಎಂ.ಕೃಷ್ಣಪ್ಪ, ಪ್ರಭು ಭೀಮನಗರ, ಪ್ರಭಾಕರ ವೈ, ಸುಭಾಷ ಚಂದ್ರ ಭೋಸ್, ಬಸವರಾಜ್, ಮಂಜುನಾಥ ನಡುವಲಕೇರಿ, ಪ್ರಕಾಶ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮಾತನಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-43-1458091728

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.