ಹರಿಹರ: ‘ಬಿ.ಆರ್.ಅಂಬೇಡ್ಕರ್ ಹಾಗೂ ಪ್ರೊ.ಬಿ. ಕೃಷ್ಣಪ್ಪ ಅವರ ಜಯಂತಿ ನಿಮಿತ್ತ ಜೂನ್ 9ರಂದು ಆಯೋಜಿಸಿರುವ ಅಂಬೇಡ್ಕರ್ ಹಬ್ಬದಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು’ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಘಟಕದ ಸಂಚಾಲಕ ಪಿ.ಜೆ.ಮಹಾಂತೇಶ್ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು.

‘ಕಾರ್ಯಕ್ರಮದಲ್ಲಿ ತಾಲ್ಲೂಕಿನ ಮಾದಿಗ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸತ್ಕರಿಸಲಾಗುವುದು. ಆಸಕ್ತ ವಿದ್ಯಾರ್ಥಿಗಳು 2025-26ನೇ ಸಾಲಿನ ಅಂಕಪಟ್ಟಿ, ಆಧಾರ್ ಕಾರ್ಡ್, ಒಂದು ಪಾಸ್ಪೋರ್ಟ್ ಅಳತೆಯ ಭಾವಚಿತ್ರವನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಮೊ.ನಂ: 9900194567ಗೆ ಸಂಪರ್ಕಿಸಬೇಕು’ ಎಂದು ಕೋರಿದರು.

‘ಮೈತ್ರಿವನದ ಸಭಾಂಗಣದಲ್ಲಿ ಅಂದು ಬೆಳಿಗ್ಗೆ 10ಕ್ಕೆ ನಡೆಯುವ ಕಾರ್ಯಕ್ರಮವನ್ನು ಪ್ರಗತಿಪರ ಚಿಂತಕ ಕೆ.ಎಸ್.ಭಗವಾನ್ ಉದ್ಘಾಟಿಸುವರು. ಕೋಡಿಹಳ್ಳಿ ಆದಿ ಜಾಂಬವ ಪೀಠದ ಷಡಕ್ಷರಮುನಿ ದೇಶೀಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಕದಸಂಸ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು’ ಎಂದರು.

‘ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹಾಗೂ ಕದಸಂಸ ಜಿಲ್ಲಾ ಘಟಕದ ಸಂಚಾಲಕ ಕುಂದವಾಡ ಮಂಜುನಾಥ ನೋಟ್ಬುಕ್ ವಿತರಿಸುವರು. ಶಾಸಕ ಬಿ.ಪಿ. ಹರೀಶ್ ಹಾಗೂ ಮಾಜಿ ಶಾಸಕ ಎಸ್.ರಾಮಪ್ಪ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಘಟಕದ ಅಧ್ಯಕ್ಷ ನಂದಿಗಾವಿ ಶ್ರೀನಿವಾಸ್, ಮಾನವ ಬಂಧುತ್ವ ವೇದಿಕೆಯ ರಾಜ್ಯ ಘಟಕದ ಸಂಚಾಲಕ ಎ.ಬಿ.ರಾಮಚಂದ್ರಪ್ಪ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸುವರು’ ಎಂದು ಮಾಹಿತಿ ನೀಡಿದರು.

‘ಇನ್ಸೈಟ್ಸ್ ಐಎಎಸ್ ಸ್ಥಾಪಕ ಜಿ.ಬಿ. ವಿನಯಕುಮಾರ್ ಅವರು ಬಿ.ಆರ್.ಅಂಬೇಡ್ಕರ್ ಹಾಗೂ ಪ್ರೊ.ಬಿ.ಕೃಷ್ಣಪ್ಪ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವರು’ ಎಂದರು.

ಪದಾಧಿಕಾರಿ ಸುರೇಶ್ ಡಿ. ಕೆಂಚನಹಳ್ಳಿ, ತಿಮ್ಮಣ್ಣ ಕಡ್ಲೆಗೊಂದಿ, ಚೌಡಪ್ಪ ಸಿ. ಭಾನುವಳ್ಳಿ, ಗುಡದಪ್ಪ ಮಲ್ಲನಾಯಕನಹಳ್ಳಿ, ಬೆಣ್ಣೆ ರಾಜಪ್ಪ, ಶಂಕರ್, ಚಂದ್ರಶೇಖರ್, ರವಿ, ಚಂದ್ರಪ್ಪ, ಮುರುಳಿ, ಹಳದೇಶ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-43-927151170

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.