ಹರಿಹರ: ನಿಗದಿತ ಸಮಯದಲ್ಲಿ ನಗರಸಭೆಯ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸದ ಗುತ್ತಿಗೆದಾರನನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಶಾಸಕ ಬಿ.ಪಿ.ಹರೀಶ್ ಅವರು ನಗರಸಭೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರಸಭೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ ನೂತನ ಕಟ್ಟಡ ಕಾಮಗಾರಿ ಸ್ಥಗಿತಗೊಂಡಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ, ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಅವರು ಮಾತನಾಡಿದರು.

ಅಧಿಕಾರಿಗಳಿಂದ ಕಾಮಗಾರಿಯ ಮಾಹಿತಿ ಪಡೆದ ಅವರು, ‘ಗುತ್ತಿಗೆದಾರನಿಗೆ ಕೆಲಸ ಮಾಡಲು ಆಗದಿದ್ದರೆ ತಕ್ಷಣವೇ ನೋಟಿಸ್ ನೀಡಿ, ಬೇರೆಯವರಿಗೆ ಗುತ್ತಿಗೆ ವಹಿಸಿ ಆದಷ್ಟು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಿ’ ಎಂದು ತಾಕೀತು ಮಾಡಿದರು.

ಈ ವೇಳೆ ಸ್ಥಳದಲ್ಲಿದ್ದ ಎಇಇ ವಿನಯ್ ಕುಮಾರ್ ಅವರು, ‘ಗುತ್ತಿಗೆದಾರನಿಗೆ ಈಗಾಗಲೇ ಹಲವು ಬಾರಿ ನೋಟಿಸ್ ನೀಡಿ ಕಾಮಗಾರಿ ಮುಂದುವರಿಸಲು ಸೂಚನೆ ನೀಡಿದ್ದರೂ, ಅವರಿಂದ ಯಾವುದೇ ಉತ್ತರ ಬಂದಿಲ್ಲ’ ಎಂದು ಶಾಸಕರ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ‘ನೋಟಿಸ್ಗೆ ಉತ್ತರಿಸದ ಇಂತಹ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಮೇಲಧಿಕಾರಿಗಳಿಗೆ ದೂರು ನೀಡಿ. ಈ ಬಗ್ಗೆ ನಾನೂ ಅವರೊಂದಿಗೆ ಮಾತನಾಡುತ್ತೇನೆ’ ಎಂದರು.

ರೈಲ್ವೆ ಕೆಳಸೇತುವೆ ರಸ್ತೆ ಪರಿಶೀಲನೆ: ಇದಕ್ಕೂ ಮುನ್ನ ನಗರದ ಹರಪನಹಳ್ಳಿ ರಸ್ತೆಯ ರೈಲ್ವೆ ಕೆಳಸೇತುವೆ (ಅಂಡರ್ ಪಾಸ್) ರಸ್ತೆಗೆ ಅಧಿಕಾರಿಗಳೊಂದಿಗೆ ಶಾಸಕರು ಭೇಟಿ ನೀಡಿ ಪರಿಶೀಲಿಸಿದರು.

ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳಿಂದ ವಾಹನ ಸವಾರರು ತೀವ್ರ ಸಂಕಷ್ಟ ಪಡುತ್ತಿದ್ದಾರೆ. ಮಳೆ ನೀರು ಸರಾಗವಾಗಿ ಹರಿದು ಹೋಗಲು ಶಾಶ್ವತ ಪರಿಹಾರ ಕಲ್ಪಿಸಬೇಕು ಹಾಗೂ ರಸ್ತೆಯನ್ನು ಸಂಪೂರ್ಣ ಗುಂಡಿಮುಕ್ತಗೊಳಿಸಬೇಕು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪೌರಾಯುಕ್ತೆ ಈರಮ್ಮ, ಬಿಜೆಪಿ ನಗರ ಘಟಕದ ಅಧ್ಯಕ್ಷ ಅಜಿತ್ ಸಾವಂತ್, ಪ್ರಧಾನ ಕಾರ್ಯದರ್ಶಿಗಳಾದ ಮಂಜಾನಾಯ್ಕ್, ತುಳಜಪ್ಪ ಭೂತೆ, ಧೂಡಾ ಮಾಜಿ ಸದಸ್ಯ ರಾಜು ರೋಖಡೆ, ಮುಖಂಡರಾದ ಚಂದ್ರಶೇಖರ್ ಸರಪದ, ವೈ.ಬಿ. ಪ್ರಭಾಕರ್ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-43-990013004

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.