ಹರಿಹರ: ‘ಅಡುಗೆ ಅನಿಲದ ಸಿಲಿಂಡರ್ಗಳನ್ನು ಗ್ರಾಹಕರ ಮನೆಗೆ ತಲುಪಿಸದಿದ್ದರೆ ಏಜೆನ್ಸಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು’ ಎಂದು ಶಾಸಕ ಬಿ.ಪಿ. ಹರೀಶ್ ಎಚ್ಚರಿಸಿದರು.

ತಾಲ್ಲೂಕು ಕಚೇರಿಯಲ್ಲಿ ಶನಿವಾರ ನಡೆದ ಆಹಾರ, ನಾಗರಿಕ ಸರಬರಾಜು ಇಲಾಖೆ ಹಾಗೂ ಅಡುಗೆ ಅನಿಲ ವಿತರಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಗ್ರಾಹಕರು ಬುಕ್ ಮಾಡಿದ ಸಿಲಿಂಡರ್ಗಳನ್ನು ಕಡ್ಡಾಯವಾಗಿ ಮನೆ–ಮನೆಗೆ ತಲುಪಿಸುವ ವ್ಯವಸ್ಥೆಯಾಗಬೇಕು. ನಿಯಮಗಳನ್ನು ಉಲ್ಲಂಘಿಸಿದರೆ ಏಜೆನ್ಸಿಗಳ ಪರವಾನಗಿ ರದ್ದುಪಡಿಸಲಾಗುವುದು’ ಎಂದರು.

‘ಗೃಹಬಳಕೆಯ ಸಿಲಿಂಡರ್ಗಳನ್ನು ಹೋಟೆಲ್ ಸೇರಿದಂತೆ ವಾಣಿಜ್ಯ ಉದ್ದೇಶಗಳಿಗೆ ಬಳಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

‘ಸರಿಯಾದ ಸಮಯಕ್ಕೆ ಬುಕ್ಕಿಂಗ್ ಮಾಡದಿರುವುದು, ಕೆವೈಸಿ ಹಾಗೂ ಆಧಾರ್ ನೋಂದಣಿ ಮಾಡಿಸದಿರುವುದು ಮತ್ತು ನೋಂದಾಯಿತ ಸಂಖ್ಯೆಯ ಬದಲು ಬೇರೆ ಮೊಬೈಲ್ ಸಂಖ್ಯೆಯಿಂದ ಬುಕ್ ಮಾಡುವುದರಿಂದ ವಿತರಣೆಯಲ್ಲಿ ಸಮಸ್ಯೆಗಳು ಹೆಚ್ಚಾಗುತ್ತಿವೆ’ ಎಂದು ಅಧಿಕಾರಿಗಳು ತಿಳಿಸಿದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಶಿರಸ್ತೇದಾರ್ ಮಂಜುನಾಥ್, ನಗರ ಶಿರಸ್ತೇದಾರ್ ನಜರುಲ್ಲಾ, ಗ್ರಾಮಾಂತರ ಶಿರಸ್ತೇದಾರ್ ಶಿವಕುಮಾರ್ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಗ್ರಾಹಕರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-43-1671704004

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.