ಹರಿಹರ: ‘ಪೋಷಕರು ಖಾಸಗಿ ಶಾಲೆಗಳ ಮೇಲಿನ ವ್ಯಾಮೋಹ ಬಿಟ್ಟು, ಅನುಭವಿ ಶಿಕ್ಷಕರಿರುವ ಹಾಗೂ ಗುಣಮಟ್ಟದ ಶಿಕ್ಷಣ ನೀಡುವ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸಬೇಕು’ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದರು.

ನಗರದ ಗುತ್ತೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯಿಂದ ಸೋಮವಾರ ಹಮ್ಮಿಕೊಂಡಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಸರ್ಕಾರಿ ಶಾಲೆಗಳಲ್ಲಿ ಓದಿದವರು ಇಂದು ರಾಜಕೀಯ ಸೇರಿ ಎಲ್ಲ ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಮಾಡಿದ್ದಾರೆ. ಇಲ್ಲಿನ ವಿದ್ಯಾರ್ಥಿಗಳು ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಿದ್ದು, ಎಂತಹ ಸಮಸ್ಯೆಯನ್ನಾದರೂ ಎದುರಿಸುವ ಆತ್ಮವಿಶ್ವಾಸ ಹೊಂದಿರುತ್ತಾರೆ. ಸರ್ಕಾರ ನೀಡುವ ಉಚಿತ ಪಠ್ಯಪುಸ್ತಕ, ಸಮವಸ್ತ್ರ ಹಾಗೂ ಬಿಸಿಯೂಟದ ಸೌಲಭ್ಯವನ್ನು ಎಲ್ಲರೂ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಶಾಲಾ ಪ್ರಾರಂಭೋತ್ಸವದ ಮೊದಲ ದಿನವಾದ ಸೋಮವಾರ ತಾಲ್ಲೂಕಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ಹಾಗೂ ಒಂದು ಜೊತೆ ಸಮವಸ್ತ್ರ ವಿತರಿಸಲಾಯಿತು.

ಮೊದಲ ದಿನದ ಸಂಭ್ರಮದ ಹಿನ್ನೆಲೆಯಲ್ಲಿ ಬಹುತೇಕ ಎಲ್ಲಾ ಶಾಲೆಗಳಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಸಿಬ್ಬಂದಿಯೊಂದಿಗೆ ವಿದ್ಯಾರ್ಥಿಗಳು ಸಿಹಿಯೂಟ ಸವಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ದುರ್ಗಪ್ಪ, ಮುಖ್ಯಶಿಕ್ಷಕ ನಾಯಕ್ ಎಂ.ಆರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನಾಗರಾಜ್ ಬಿ.ಜೆ, ಸಾಮಾಜಿಕ ಕಾರ್ಯಕರ್ತ ಐರಣಿ ಹನುಮಂತಪ್ಪ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-43-637874605

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.