ಹರಿಹರ: ಇಲ್ಲಿನ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಟ್ರಸ್ಟಿಗಳು ಹಾಗೂ ಪದಚ್ಯುತ ಪೀಠಾಧ್ಯಕ್ಷ ವಚನಾನಂದ ಸ್ವಾಮೀಜಿ ಬೆಂಬಲಿಗರ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ, ಮಠದ ಆವರಣದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತವು ಜಾರಿಗೊಳಿಸಿದ್ದ ನಿಷೇಧಾಜ್ಞೆಯನ್ನು ಜೂನ್ 15ರವರೆಗೆ ಮುಂದುವರಿಸಲಾಗಿದೆ.

ಈ ಹಿಂದೆ ಮೇ 4ರಿಂದ 31ರವರೆಗೆ ಜಾರಿಯಲ್ಲಿದ್ದ ನಿಷೇಧಾಜ್ಞೆಯ ಅವಧಿಯು ಮುಕ್ತಾಯಗೊಂಡ ಕಾರಣ, ಜಿಲ್ಲಾ ಪೊಲೀಸ್ ಅಧೀಕ್ಷಕರು ಸಲ್ಲಿಸಿದ್ದ ವರದಿ ಆಧರಿಸಿ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಕಲಂ 163ರಡಿ ಜೂನ್ 1ರಿಂದ 15ರವರೆಗೆ ನಿಷೇಧಾಜ್ಞೆಯನ್ನು ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆಯು ಕೇವಲ ಸಭೆ, ಸಮಾರಂಭ ಮತ್ತು ಪತ್ರಿಕಾಗೋಷ್ಠಿಗಳಿಗೆ ಅನ್ವಯಿಸಲಿದ್ದು, ಮಠದಲ್ಲಿ ನಡೆಯುವ ದೈನಂದಿನ ಧಾರ್ಮಿಕ ಪೂಜಾ ವಿಧಾನಗಳಿಗೆ ಅಡ್ಡಿಯಿರುವುದಿಲ್ಲ. ಆದರೆ, ಜೂನ್ 15ರವರೆಗೆ ಯಾವುದೇ ಬಣಗಳು ಶಕ್ತಿ ಪ್ರದರ್ಶನ ಮಾಡಲು ಆಸ್ಪದವಿಲ್ಲ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-44-232507705

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.