ಹರಿಹರ: ‘ಸದೃಢ ಮನಸ್ಸು ಹಾಗೂ ದೇಹವನ್ನು ಹೊಂದಲು ಕ್ರೀಡೆ ಸಹಕಾರಿ. ಆದ್ದರಿಂದ ಪಾಲಕರು ಮಕ್ಕಳನ್ನು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹೇಳಿದರು.

ತಾಲ್ಲೂಕಿನ ಕೊಂಡಜ್ಜಿಯಲ್ಲಿ ಈಚೆಗೆ ನಡೆದ ಪೊಲೀಸ್ ಪಬ್ಲಿಕ್ ಶಾಲೆಯ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಬಹುಪಾಲು ಪಾಲಕರು ತಮ್ಮ ಮಕ್ಕಳು ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆಯಬೇಕೆಂಬ ಹಂಬಲವನ್ನಷ್ಟೇ ಹೊಂದಿರುತ್ತಾರೆ. ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಲು ಕ್ರೀಡೆಗಳು ಸಹಕಾರಿಯಾಗಿವೆ’ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜೂನಿಯರ್ ವಿಭಾಗದ ಮ್ಯಾರಥಾನ್ ಸ್ಪರ್ಧಿ ಮೊಹ್ಮದ್ ಝಯಾದ್ ಮಾತನಾಡಿದನು.

18 ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕೃಷ್ಣ ಹೌಸ್ ತಂಡ ಚಾಂಪಿಯನ್ ಆಯಿತು. ಕಾವೇರಿ ಹೌಸ್ ತಂಡ ರನ್ನರ್ಸ್ ಅಪ್ ಪ್ರಶಸ್ತಿ ಪಡೆಯಿತು.

ದಾವಣಗೆರೆ ನಗರದ ಡಿವೈಎಸ್ಪಿ ಮಲ್ಲೇಶ್ ದೊಡ್ಮನಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ಪ್ರಕಾಶ್ ಪಿ.ಬಿ., ಸಬ್ ಇನ್ಸ್ಪೆಕ್ಟರ್ ಸೋಮಶೇಖರ್ ಮಾತನಾಡಿದರು. ಪ್ರಾಚಾರ್ಯ ಎಚ್.ವಿ. ಯತೀಶ್ ಆಚಾರ್ ಅಧ್ಯಕ್ಷತೆ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.