ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗ್ರಾ.ಪಂ. ಗ್ರಂಥಾಲಯಗಳಲ್ಲಿ ‘ಶಿಕ್ಷಣಪೀಡಿಯಾ’ ಆ್ಯಪ್‌ ಮೂಲಕ ಪಠ್ಯ

Published 25 ಮೇ 2024, 16:27 IST
Last Updated 25 ಮೇ 2024, 16:27 IST
ಅಕ್ಷರ ಗಾತ್ರ

ಕಡರನಾಯ್ಕನಹಳ್ಳಿ: ‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ ‘ಶಿಕ್ಷಣಪೀಡಿಯಾ’ ಆ್ಯಪ್ ಮೂಲಕ ಪ್ರಾಥಮಿಕ, ಪ್ರೌಢ, ಮತ್ತು ಪಿಯು ಶಿಕ್ಷಣದ ಪಠ್ಯ ವಿಷಯಗಳು ಲಭಿಸಲಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕು’ ಎಂದು ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದ ಜಿಲ್ಲಾ ಸಂಯೋಜಕ ಟಿ.ಜಿ ಸುರೇಶ್ ನಾಯ್ಕ ಕರೆ ನೀಡಿದರು.

ಸಮೀಪದ ಭಾನುವಳ್ಳಿ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಶಿಕ್ಷಣಪೀಡಿಯಾ ಆ್ಯಪ್ ಬಗ್ಗೆ ಅವರು ಮಾಹಿತಿ ನೀಡಿದರು.

‘ಶಿಕ್ಷಣಪೀಡಿಯಾ’ ಆ್ಯಪ್ ಮೂಲಕ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪಾಠ, ನೋಟ್ಸ್, ಪಾಠಗಳಿಗೆ ಸಂಬಂಧಿಸಿದ ತರಗತಿಯ ವಿಡಿಯೊ, ಚಿತ್ರಗಳನ್ನು ಒದಗಿಸಲಾಗಿದೆ. ಪಿಯುಸಿ ವಿದ್ಯಾರ್ಥಿಗಳಿಗೂ ಪಠ್ಯ ಪುಸ್ತಕಗಳಿವೆ. ಪ್ರಾಥಮಿಕ ಶಾಲೆಯ ಮಕ್ಕಳಿಗೆ ಕನ್ನಡ, ಇಂಗ್ಲಿಷ್ ಹಾಗೂ ಹಿಂಧಿ ಭಾಷೆಗಳಲ್ಲಿ ಸಣ್ಣ ಸಣ್ಣ ನೀತಿಕಥೆಗಳಿವೆ. 10ನೇ ತರಗತಿ ಹಾಗೂ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಅಭ್ಯಾಸ ಮಾಡಲು ನೀಡಲಾಗಿದೆ’ ಎಂದು ಮಾಹಿತಿ ನೀಡಿದರು. 

ಯುವಕರು ಹಾಗೂ ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಡಿಜಿಟಲ್ ಕೌಶಲಗಳನ್ನು ಬೆಳೆಸಿಕೊಳ್ಳಲು ಬೇಕಾದ ವಿವಿಧ ಮಾಹಿತಿಯನ್ನು ಒದಗಿಸಲಾಗಿದೆ. ವಿದ್ಯಾರ್ಥಿಗಳು ಗ್ರಂಥಾಲಯದಲ್ಲಿ ತಮ್ಮ ಸದಸ್ಯತ್ವ ಸಂಖ್ಯೆ ನಮೂದಿಸಿ ಆ್ಯಪ್‌ನ ಪ್ರಯೋಜನ ಪಡೆಯಬಹುದಾಗಿದೆ ಎಂದು ತಿಳಿಸಿದರು.

‘ಎನ್.ಆರ್.ಎಲ್.ಎಂ. ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು ತಯಾರಿಸಿದ ಉತ್ಪನ್ನಗಳನ್ನು ಗ್ರಾಹಕರಿಗೆ ಮಾರಾಟ ಮಾಡುವುದು, ಡಿಜಿಟಲ್ ಗ್ರಂಥಾಲಯಗಳ ಮೂಲಕ ಮಾರುಕಟ್ಟೆ ಸೌಲಭ್ಯ ಒದಗಿಸುವುದು ಹಾಗೂ ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ಸದಸ್ಯರಿಗೆ ಆರ್ಥಿಕವಾಗಿ ಸದೃಢರನ್ನಾಗಿ ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ’ ಎಂದು ತಾಲ್ಲೂಕು ವ್ಯವಸ್ಥಾಪಕ (ಕೃಷಿಯೇತರ ಜೀವನೋಪಾಯ) ಜಿ. ರಂಗಸ್ವಾಮಿ ಹೇಳಿದರು. 

ಗ್ರಂಥಪಾಲಕ ಎಸ್.ಭೀಮಪ್ಪ, ಮಹಿಳಾ ಸಂಪದ ಪ್ರತಿನಿಧಿಗಳು, ಗ್ರಾಮದ ಹಿರಿಯರಾದ ಈಶ್ವರಪ್ಪ, ರಾಮಪ್ಪ ರೆಡ್ಡಿ, ಗ್ರಾಮಸ್ಥರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT