ಹರಿಹರ: ನಗರದ ಎಚ್.ಪಿ.ಚಿನ್ನಪ್ಪ ಕಾಂಪೌಂಡ್‌ನಲ್ಲಿರುವ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಆ.30 ರಂದು ಶ್ರಾವಣ ಮಾಸದ ಗುಗ್ಗಳ, ಪಲ್ಲಕ್ಕಿ ಉತ್ಸವ ಹಾಗೂ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 8ಕ್ಕೆ ವೀರಭದ್ರ ಸ್ವಾಮಿ ದೇವರ ಗುಗ್ಗಳ, ಪಲ್ಲಕ್ಕಿ ಉತ್ಸವವು ದೇವಸ್ಥಾನದ ಆವರಣದಿಂದ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಪುರವಂತರ ಕುಣಿತದೊಂದಿಗೆ ಸಂಚರಿಸಿ ದೇವಸ್ಥಾನಕ್ಕೆ ಆಗಮಿಸುವುದು. ನಂತರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ನಡೆಯಲಿದೆ.
ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ವೀರಭದ್ರೇಶ್ವರ ಸ್ವಾಮಿ ಸೇವಾ ಸಮಿತಿಯ ಸಂಚಾಲಕ ಜಿ.ಕೆ.ಶಂಕರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.