ಹರಿಹರ: ನಗರದ ಹರಪನಹಳ್ಳಿ ಹೆದ್ದಾರಿಯ ರೈಲ್ವೆ ಕೆಳ ಸೇತುವೆಯ ರಸ್ತೆ ದುರಸ್ತಿಗೆ ಆಗ್ರಹಿಸಿ ಆಲ್ ಇಂಡಿಯಾ ಬಹುಜನ ಸಮಾಜವಾದಿ ಪಾರ್ಟಿ ಹಾಗೂ ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು ಸೋಮವಾರ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

‘ನಗರದ ಜನತೆ ಪ್ರತಿ ಮಳೆಗಾಲದಲ್ಲಿ ಸಂಕಷ್ಟ ಅನುಭವಿಸುವಂತಾಗಿದೆ. 10 ನಿಮಿಷ ಮಳೆ ಬಂದರೂ 2 ಗಂಟೆ ವಾಹನ ಸಂಚಾರ ಸ್ಥಗಿತವಾಗುತ್ತದೆ’ ಎಂದು ಬಿಎಸ್ಪಿ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಹನುಮಂತಪ್ಪ ದೂರಿದರು.

ನಗರಸಭೆ ಎಇಇ ವಿನಯ್ ಕುಮಾರ್, ಲೋಕೋಪಯೋಗಿ ಇಲಾಖೆ ಎಇಇ ಮರಿಸ್ವಾಮಿ ಸ್ಥಳಕ್ಕೆ ಆಗಮಿಸಿದ್ದರು. ಪ್ರತಿಭಟನಕಾರರು ಮೇ 25ರ ಗಡುವು ನೀಡಿದರು.

ಐರಣಿ ಹನುಮಂತಪ್ಪ, ಆರ್. ಶ್ರೀನಿವಾಸ್, ಜಬಿಉಲ್ಲಾ, ಆನಂದ್ ಕುಮಾರ್ ಎಂ.ಆರ್., ಅನಿಲ್, ರವಿ, ಸಂತೋಷ್, ಅವಿನಾಶ್, ಬೆನಕೇಶ, ಮಂಜುನಾಥ್ ನಡುವಲಕೇರಿ, ಸಂತೋಷ್ ನೋಟದವರ್, ಸೈಯದ್ ಸಲೀಂ ನಾಲಬಂದ್, ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-43-1331172931

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.