ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹರಿಹರ | ಚೆಕ್ ಬೌನ್ಸ್ ಪ್ರಕರಣ: ಶಿಕ್ಷಕಿಗೆ ಕಾರಾಗೃಹ ಶಿಕ್ಷೆ

Published 28 ಏಪ್ರಿಲ್ 2024, 16:19 IST
Last Updated 28 ಏಪ್ರಿಲ್ 2024, 16:19 IST
ಅಕ್ಷರ ಗಾತ್ರ

ಹರಿಹರ: ಚೆಕ್‌ಬೌನ್ಸ್ ಪ್ರಕರಣವೊಂದರಲ್ಲಿ ಇಲ್ಲಿನ 1ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಆರೋಪಿತೆಗೆ ವಿಧಿಸಿದ್ದ 4 ತಿಂಗಳು ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹ 4.5 ಲಕ್ಷ ದಂಡ ಪಾವತಿಸುವ ತೀರ್ಪನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ವಿವರ: ತಾಲ್ಲೂಕಿನ ಮಲೇಬೆನ್ನೂರು ಸರ್ಕಾರಿ ಉರ್ದು ಪ್ರಾಥಮಿಕ ಶಾಲಾ ಶಿಕ್ಷಕಿ ವನಜಾಕ್ಷಿದೇವಿ ಅವರು ಭಾನುವಳ್ಳಿ ಗ್ರಾಮದ ಮಲ್ಲಿನಾಥ ಎ.ಎಸ್. ಎಂಬುವವರಿಂದ ಪಡೆದಿದ್ದ ಸಾಲ ಮರುಪಾವತಿಗೆ ನೀಡಿದ್ದ ₹ 4 ಲಕ್ಷ ಮೊತ್ತದ ಚೆಕ್ ಬೌನ್ಸ್ ಆಗಿತ್ತು. ಬಳಿಕ ಮಲ್ಲಿನಾಥ ಅವರು ನ್ಯಾಯಾಲಯದ ಮೊರೆ ಹೋಗಿದ್ದರು.

ಹರಿಹರದ ನ್ಯಾಯಾಲಯವು ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಆರೋಪಿತೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣದ ಸುಧೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್, ಕೆಳ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ.

ದಂಡದ ಮೊತ್ತ ಪಾವತಿಸದಿದ್ದರೆ 2 ತಿಂಗಳು ಹೆಚ್ಚುವರಿ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ಏ.4ರಂದು ನೀಡಿರುವ ತೀರ್ಪಿನಲ್ಲಿ ಹೈಕೋರ್ಟ್‌ ಆದೇಶಿಸಿದೆ ಎಂದು ದೂರುದಾರ ಮಲ್ಲಿನಾಥ ಪರ ವಕೀಲರಾದ ನಾಗರಾಜ್ ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT