ಹರಿಹರ: ನಗರದಿಂದ ದಾವಣಗೆರೆಗೆ ಹೋಗುವ ಮಾರ್ಗದಲ್ಲಿ ಮೇಲ್ಸೇತುವೆ ಬಳಿಯ ಜೋಡಿ ರಸ್ತೆ (ಹಳೆ ಪಿ.ಬಿ.ರಸ್ತೆ) ಬಲಭಾಗದ ಸಾಲು ಮರಗಳು ಬೆಂಕಿಗೆ ಆಹುತಿಯಾದ ಸ್ಥಳಕ್ಕೆ ಮಂಗಳವಾರ ಸಾಮಾಜಿಕ ಅರಣ್ಯ ಇಲಾಖೆ ಆರ್ಎಫ್ಓ ಅಮೃತಾ ಟಿ.ಆರ್. ಭೇಟಿ ನೀಡಿ ಪರಿಶೀಲಿಸಿದರು.

ಈ ರಸ್ತೆಯಲ್ಲಿ ಹಗಲು–ರಾತ್ರಿ ಜನ ಸಂಚಾರ ಇರುತ್ತದೆ. ಮರಗಳಿಗೆ ಬೆಂಕಿ ಹತ್ತಿರುವುದರ ಬಗ್ಗೆ ತಕ್ಷಣವೇ ಯಾರಾದರೂ ಅಗ್ನಿಶಾಮಕ ದಳದವರಿಗಾಗಲಿ, ಅರಣ್ಯ ಇಲಾಖೆಗಾಗಲಿ ಮಾಹಿತಿ ನೀಡಿದ್ದರೆ ಮರಗಳನ್ನು ಉಳಿಸಿಕೊಳ್ಳಬಹುದಾಗಿತ್ತು ಎಂದರು.

ಸ್ಥಳ ಪರಿಶೀಲನೆ ಮಾಡಿದಾಗ ಯಾರೋ ದುಷ್ಕರ್ಮಿಗಳು ಉದ್ದೇಶ ಪೂರ್ವಕವಾಗಿ ಬೆಂಕಿ ಹಚ್ಚಿದಂತೆ ಕಾಣುತ್ತಿದೆ. ಪ್ರಾದೇಶಿಕ ಅರಣ್ಯ ಇಲಾಖೆಯವರಿಗೆ ಒಂದು ವರದಿಯನ್ನು ಕಳಿಸಿ ದೂರು ದಾಖಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲು ಕೋರಲಾಗುವುದು ಎಂದು ಮಾಹಿತಿ ನೀಡಿದರು.

ಈ ಜೋಡಿ ರಸ್ತೆಯ ಇಕ್ಕೆಲಗಳಲ್ಲಿ ಬೆಳೆದಿರುವ ಜಾಲಿ ಗಿಡಗಳನ್ನು ತೆರವು ಮಾಡಲು ಲೋಕೋಪಯೋಗಿ ಇಲಾಖೆಯವ ರಿಗೂ ಪತ್ರ ಬರೆಯಲಾಗುವುದು ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-43-2053539010

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.